ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ಚಿಕಾಗೋ: ಪೆನ್ಸಿಲ್ವೇನಿಯಾದಲ್ಲಿ ನಡೆಸುತ್ತಿದ್ದ ಚುನಾವಣಾ ರ‍್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಮತ್ತು ರಿಪಬ್ಲಿಕನ್ ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಟ್ರಂಪ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿಯಲ್ಲಿ ಟ್ರಂಪ್ ಕಿವಿಗೆ ಗಾಯವಾಗಿದೆ.

ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೋರ್ವನಿಗೆ ಗುಂಡು ತಗುಲಿ ಪರಿಣಾಮ ಮೃತಪಟ್ಟಿದ್ದಾರೆ. ಅಮೆರಿಕ ಭದ್ರತಾ ಪಡೆಗಳು ಘಟನಾ ಸ್ಥಳದಲ್ಲಿ ಶಂಕಿತ ಶೂಟರ್​ನನ್ನು ಹೊಡೆದುರುಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ರಂಪ್ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ದಾಳಿಕೋರ ಗುಂಡು ಹಾರಿಸಿದ್ದಾನೆ. ಈ ಸಮಯದಲ್ಲಿ ಟ್ರಂಪ್​ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾರೆ. ಭದ್ರತಾ ಸಿಬ್ಬಂದಿ ತಕ್ಷಣವೇ ಟ್ರಂಪ್ ಅವರನ್ನು ಸುತ್ತುವರೆದರು. ಮಾಜಿ ಅಧ್ಯಕ್ಷರನ್ನು ವೇದಿಕೆಯಿಂದ ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯ ಟ್ರಂಪ್ ಸುರಕ್ಷಿತವಾಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ವರದಿಯಾಗಿದೆ

Leave a Reply

Your email address will not be published. Required fields are marked *