ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾವು..!!

ಮೈಸೂರು: ಮೈಸೂರು ನಗರದ ಚಾಮುಂಡಿಪುರಂ ಲೇಔಟ್ ನಿವಾಸದಲ್ಲಿ ದಂಪತಿ ಹಾಗೂ ಇಬ್ಬರು ಪುತ್ರಿಯರು ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಮನೆಯಿಂದ ದುರ್ವಾಸನೆ ಬರುತ್ತಿದ್ದಂತೆ ನೆರೆಹೊರೆಯವರು ದೂರು ನೀಡಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸಾಲಬಾಧೆಯಿಂದ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸಾಲಬಾಧೆ

ಮೃತರನ್ನು 48 ವರ್ಷದ ಮಹದೇವಸ್ವಾಮಿ, ಅವರ ಪತ್ನಿ 35 ವರ್ಷದ ಅನಿತಾ ಮತ್ತು ಅವರ ಪುತ್ರಿಯರಾದ 17 ವರ್ಷದ ಚಂದ್ರಕಲಾ ಮತ್ತು 15 ವರ್ಷದ ಧನಲಕ್ಷ್ಮಿ ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಾಗಿಲು ಒಡೆದು ನೋಡಿದಾಗ ನಾಲ್ಕು ಶವಗಳು ಪತ್ತೆಯಾಗಿವೆ.

ಚಂದ್ರಕಲಾ ಮೃತದೇಹ ಮನೆಯ ಚಾವಣಿಯ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಉಳಿದ ಮೂರು ಶವಗಳು ನೆಲದ ಮೇಲೆ ಬಿದ್ದಿದ್ದವು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಇಂದು ಪರೀಕ್ಷೆ ನಡೆಯುವ ಸಾಧ್ಯತೆ ಇದೆ.

18 ವರ್ಷಗಳ ಹಿಂದೆ ಮಹದೇವಸ್ವಾಮಿ ಮತ್ತು ಧನಲಕ್ಷ್ಮಿ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಮಹದೇವಸ್ವಾಮಿ ಅವರು ನಗರದಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದರು. ಸಾಲಬಾಧೆಯಿಂದ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಎರಡು ತಿಂಗಳ ಹಿಂದೆಯಷ್ಟೇ ಕುಟುಂಬ ಮೈಸೂರಿನ ಬಾಡಿಗೆ ಮನೆಗೆ ಸ್ಥಳಾಂತರವಾಗಿತ್ತು. ನಾಲ್ವರೂ ಗುರುವಾರ ಅಥವಾ ಶುಕ್ರವಾರ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಜ್ಞರನ್ನು ಕರೆಸಲಾಯಿತು. ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *