ರಸ್ತೆ ಅಪಘಾತಗಳ ಸರಣಿ.
ಬೆಳಗಾವಿ: ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾಲಶಿರಗೂರು ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಹಾರೂಗೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕುಡಚಿ ಕಡೆಯಿಂದ ಹಾರೂಗೇರಿ ಕಡೆಗೆ ಹೊರಟಿದ್ದ ಸಿಮೆಂಟ್ ಲಾರಿ, ತಿರುವಿನಲ್ಲಿ ಶಾಲೆಗೆ ಹೋಗ್ತಿದ್ದ ವಿದ್ಯಾರ್ಥಿಗಳ ಮೇಲೆ ಪಲ್ಟಿಯಾಗಿದೆ. ಈ ವೇಳೆ 5ನೇ ತರಗತಿ ವಿದ್ಯಾರ್ಥಿ ಅಮಿತ್ ಕಾಂಬಳೆ(11) ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಅಂಜಲಿ ಕಾಂಬಳೆ(15), ಅವಿನಾಶ ಕಾಂಬಳೆ(14) ಸ್ಥಿತಿ ಗಂಭೀರವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಮೂಲಕ ಲಾರಿ ಮೇಲೆತ್ತಿ ಕೆಳಗೆ ಸಿಲುಕಿದ್ದವರ ರಕ್ಷಣೆ ಮಾಡಿದ್ದಾರೆ.
ಖಾಸಗಿಬಸ್ ಅಪ*ತ
ನಿಯಂತ್ರಣ ತಪ್ಪಿ ಖಾಸಗಿ ಬಸ್ ಧರೆಗೆ ಗುದ್ದಿದ ಪರಿಣಾಮ ಮಗು ಅಸುನೀಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ನಲ್ಲಿ ನಡೆದಿದೆ. ಒಂದೂವರೆ ವರ್ಷದ ಮಗು ಮೃತಪಟ್ಟಿದ್ದರೆ, ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯವಾಗಿದೆ. ಬಸ್ ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿತ್ತು ಎನ್ನಲಾಗಿದ್ದು, ಘಟನೆ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ಗೆ ಬಸ್ ಡಿಕ್ಕಿ: ಇಬ್ಬರು ಸಾ*
ಬಸ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಬಳಿ ನಡೆದಿದೆ. ಮಗು ಸ್ಥಿತಿ ಗಂಭೀರವಾಗಿದ್ದು, ಓವರ್ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಬಸ್ ಬೈಕ್ಗೆ ಗುದ್ದಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಮಾಹಿತಿ ಸಂಗ್ರಹಿಸುವ ಕೆಲಸ ಮಾಡಲಾಗ್ತಿದೆ.
For More Updates Join our WhatsApp Group :




