ಈ ದಾಖಲೆಗಳು ಇರುವ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಲ್ಯಾಪ್ ಟಾಪ್: ಸೆ.16 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..!!

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು ಕಾಂಗ್ರೆಸ್ ಸರ್ಕಾರ (Congress Government) ನಿರ್ಧರಿಸಿದೆ. ಈ ವರ್ಗದ ವಿದ್ಯಾರ್ಥಿಗಳು ಕೂಡ ಉಚಿತ ಲ್ಯಾಪ್ ಟಾಪ್ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಹೊರಡಿಸಿದೆ. ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ಬಗ್ಗೆ ಕಾರ್ಮಿಕ ಇಲಾಖೆ (Department Of Labor) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ವಿದ್ಯಾರ್ಥಿ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಅನ್ನು ನೀಡಲಾಗುತ್ತದೆ. ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ಅರ್ಜಿ ನಮೂನೆಯನ್ನು ಆಯಾ ಜಿಲ್ಲಾ, ತಾಲೂಕು ಕಾರ್ಮಿಕ ಅಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ. ಇನ್ನೂ ಸೆಪ್ಟೆಂಬರ್ 16 ಉಚಿತ ಲ್ಯಾಪ್ ಟಾಪ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ನಿಗದಿ ಮಾಡಿದೆ. ನಿಗದಿತ ಸಮಯದೊಳಗೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಸರ್ಕಾರದ ಉಚಿತ ಲಾಪ್ ಟಾಪ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ವಿದ್ಯಾರ್ಥಿ

ಅರ್ಜಿ ಸಲ್ಲಿಕೆಗೆ ಈ ದಾಖಲೆ ಅಗತ್ಯ

*ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ

*ಮಕ್ಕಳ ಆಧಾರ್ ಕಾರ್ಡ್

*ವ್ಯಾಸಂಗ ದೃಢೀಕರಣ ಪತ್ರ

*ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ

*ಈ ಎಲ್ಲಾ ದಾಖಲೆಗಳ ಜೊತೆಗೆ ಈ ಹಿಂದೆ ಉಚಿತ ಲ್ಯಾಪ್ ಟಾಪ್ ಪಡೆದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರವನ್ನು ಇಲಾಖಾ ಕಚೇರಿಗೆ ಸಲ್ಲಿಸಿ ಉಚಿತ ಲಾಪ್ ಟಾಪ್ ಅನ್ನು ಪಡೆಯಬಹುದು.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *