ಸರ್ಕಾರ ಪೋಷಕರ ಹೊರೆ ಇಳಿಸಿದೆ, 61 ಲಕ್ಷ ಮಕ್ಕಳಿಗೆ ಅನುಕೂಲ.
ಬೆಂಗಳೂರು: ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್ ವಿತರಣೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೌದು..2026 -27ನೇ ಸಾಲಿನ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ಅನುಮೋದನೆ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಶುಭಮಂಗಳಾ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಸುಮಾರು 61 ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ.ಈ ಮೂಲಕ ಮೊದಲ ಬಾರಿಗೆ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕದ ಜೊತೆಗೆ ನೋಟ್ಬುಕ್ ಸಹ ವಿತರಣೆಗೆ ಮುಂದಾಗಿದೆ.
ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ಶಿಕ್ಷಣ ಇಲಾಖೆ
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ 1ರಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ ವಿತರಣೆ ಸಂಬಂಧ ಶಿಕ್ಷಣ ಇಲಾಖೆಯು 30 ಕೋಟಿ 83 ಲಕ್ಷದ 25 ಸಾವಿರ ಹಣದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿತ್ತು. ಇದೀಗ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆ ಸರ್ಕಾರ ಸಹ ಒಪ್ಪಿಗೆ ಸೂಚಿಸಿದ್ದು, 290.46 ಕೋಟಿ ರೂ ಅನುದಾನವನ್ನು ಶಾಲಾ ಶಿಕ್ಷಣ ಇಲಾಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಇದರ ಬೆನ್ನಲ್ಲೇ ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲು ತಯಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಶುಭ ಮಂಗಳ ಆದೇಶ ಹೊರಡಿಸಿದ್ದಾರೆ. ಇನ್ನು ಪಠ್ಯ ಪುಸ್ತಕದ ಕಾಗದ ಮತ್ತು ಮುದ್ರಣ ಗುಣಮಟ್ಟ ರಾಜಿ ಆಗೋ ಹಾಗಿಲ್ಲ .
For More Updates Join our WhatsApp Group :




