ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿ ರಾಂಗ್ ರೂಟ್‌ನಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಅಜಾಗರೂಕತನ ಭಾರೀ ಅಪಘಾತಕ್ಕೆ ಕಾರಣವಾಗಿದೆ. ಸಿವಿ ರಾಮನ್ ನಗರದಲ್ಲಿ ನಡೆದ ಈ ಘಟನೆಯಲ್ಲಿ, ಬೈಕ್ ಫುಲ್ ಸ್ಪೀಡ್‌ನಲ್ಲಿ ಆಟೋಗೆ ಡಿಕ್ಕಿ ಹೊಡೆದು, ಎರಡೂ ವಾಹನಗಳು ಪಲ್ಟಿಯಾದವು.
ಅದೃಷ್ಟವಶಾತ್, ಅಪಘಾತದಲ್ಲಿ ಗಂಭೀರ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ರಸ್ತೆ ಸುರಕ್ಷತಾ ನಿಯಮಗಳನ್ನು ಲೆಕ್ಕಿಸದ ಬೈಕ್ ಸವಾರನ ನಡೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, “ಅಜಾಗರೂಕತೆ ಮತ್ತು ನಿಯಮ ಉಲ್ಲಂಘನೆ ಇತರರ ಪ್ರಾಣಕ್ಕೂ ಅಪಾಯ” ಎಂಬ ಕಮೆಂಟ್‌ಗಳು ಭಾರೀ ಪ್ರಮಾಣದಲ್ಲಿ ಹರಿದಾಡುತ್ತಿವೆ.
For More Updates Join our WhatsApp Group :
