ಸಿಎಂರಿಂದ ಪೂರ್ಣಾವಧಿ ಜನತಾ ದರ್ಶನ | ಸ್ಥಳದಲ್ಲೇ ಪರಿಹಾರಕ್ಕೆ ಆದ್ಯತೆ. ಅಧಿಕಾರಿ ಸಿಬ್ಬಂದಿ ಹಾಜರಿರಲು ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ನವೆಂಬರ್ ಇಂದು ಬೆಳಿಗ್ಗೆ 9:30 ಗಂಟೆಯಿ0ದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.

ಯುವಕ

ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯವು ಸಕಲ ಸಿದ್ಧತೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾ ಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು.

ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ.

ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾ0ಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುವರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಸುತ್ತೋಲೆ ಹೊರಡಿಸಿ ಸರ್ಕಾರದ ಎಲ್ಲ ಕಾರ್ಯದರ್ಶಿಗಳು / ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ/ ಉಪವಿಭಾಗ/ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.

 ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾ0ಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆಹಚ್ಚಲು ಅನುಕೂಲವಾಗಲಿದೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ಕಳೆದ ಮೂರು ದಿನಗಳಿಂದ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಮತ್ತು ಇತರ ವ್ಯವಸ್ಥೆಗಳನ್ನು ಸಜ್ಜುಗೊಳಿಸಲಾಗುತ್ತಿದೆ.

Pragati TV Social Connect for more latest u

Leave a Reply

Your email address will not be published. Required fields are marked *