ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಐಷಾರಾಮಿ ಜೀವನ ಶೈಲಿ ಮತ್ತು ಮೋಜು-ಮಸ್ತಿಯ ವೀಡಿಯೋಗಳು ವೈರಲ್ ಆಗಿದ್ದು, ಅಧಿಕಾರಿಗಳ ನಡೆ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಹಿರಿಯ ಜೈಲು ಅಧಿಕಾರಿಗಳ ಸಭೆ ಕರೆದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಭೆಯಲ್ಲಿ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಫೋಟೋ ಮತ್ತು ವೀಡಿಯೋಗಳನ್ನು ಪ್ರೊಜೆಕ್ಟರ್ ಮೂಲಕ ಪ್ರದರ್ಶಿಸಿದ ಸಚಿವರು, ಈ ಬಗ್ಗೆ ಅಧಿಕಾರಿಗಳಿಂದ ವಿವರಣೆ ಕೋರಿದ್ದಾರೆ. ಕಾರಾಗೃಹ ಎಡಿಜಿಪಿ ಬಿ.ದಯಾನಂದ ವಿದೇಶದಲ್ಲಿರುವ ಹಿನ್ನೆಲೆ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆದಿದೆ.
For More Updates Join our WhatsApp Group :
