ಕರ್ನೂಲ್: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಮೂವರು ಅಪ್ರಾಪ್ತರ ಬಾಲಕರು, ನಂತರ ಆಕೆಯನ್ನು ಹತ್ಯೆ ಮಾಡಿ ಮೃತದೇಹವನ್ನು ಕಾಲುವೆಗೆ ಎಸೆದಿರುವ ಘಟನೆಯೊಂದು ನಂದ್ಯಾಲ ಜಿಲ್ಲೆಯ ಪಗಿದ್ಯಾಲ ಮಂಡಲದ ಮುಚ್ಚುಮರ್ರಿ ಗ್ರಾಮದಲ್ಲಿ ನಡೆದಿದೆ.
ಬಾಲಕಿಯು ತನ್ನ ಮನೆಯಿಂದ ಸ್ನೇಹಿತರೊಡಗೂಡಿ ಆಟವಾಡಲು ಹೋಗಿದ್ದಳು. ಆದರೆ ಸಂಜೆಯಾದರೂ ಮಗಳು ಮನೆಗೆ ಬಾರದ್ದನ್ನು ಗಮನಿಸಿದ ಪೋಷಕರು ಗಾಬರಿಯಾಗಿದ್ದಾರೆ. ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾರೆ.
ಇದರಂತೆ ಪೊಲೀಸರು ಮೂವರು ಬಾಲಕರನ್ನು ವಶಪಡಿಸಿಕೊಂಡು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ವಿಚಾರಣೆ ವೇಳೆ ಮೂವರು ಸೇರಿ ಬಾಲಕಿ ಮೇಲೆ ಅತ್ಯಾಚಾರ ವೆಸಗಿ, ಬಳಿಕ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಬಳಿಕ ಮೃತದೇಹವನ್ನು ರಾಜಕಾಲುವೆಗೆ ಎಸೆದಿರೋದಾಗಿ ಹೇಳಿದ್ದಾರೆ.
ಮಾಹಿತಿಯಂತೆ, ಮೂವರು ಬಾಲಕರು 3ನೇ ತರಗತಿ ಬಾಲಕಿಯನ್ನು ಆಟವಾಡಲು ಬರುವಂತೆ ಒತ್ತಾಯಿಸಿದ್ದಾರೆ. ಬಳಿಕ ಆಕೆಯ ಬಾಯಿ ಮುಚ್ಚಿಸಿ ಲೈಂಗಿಕದೌರ್ಜನ್ಯ ನಡೆಸಿದ್ದಾರೆ. ಬಳಿಕ ಬಾಲಕಿಯ ಪೋಷಕರಿಗೆ ಹೆದರಿ ಆಕೆಯನ್ನು ಕೊಲೆ ಮಾಡಿದ್ದಾರೆ. ಯಾರಿಗೆ ತಿಳಿಯಬಾರದೆಂದು ರಾಜಕಾಲುವೆಗೆ ಎಸೆದಿದ್ದಾರೆಂದು ತಿಳಿದುಬಂದಿದೆ,