ಕನಕಪುರ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ: 200ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯ ಪರಿಶೀಲನೆ..!
ಬೆಂಗಳೂರು: ಕನಕಪುರ ರಸ್ತೆಯ ಆರ್ಟ್ ಆಫ್ ಲೀವಿಂಗ್ ಆಶ್ರಮದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಶಂಕಿತ ವ್ಯಕ್ತಿ ಲೋಹಿತ್‌ನನ್ನು ವಿವಿಧ ತನಿಖಾ ತಂಡಗಳು ನಿರಂತರ ವಿಚಾರಣೆ ನಡೆಸುತ್ತಿವೆ.ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸ್ವತಃ ಆಡುಗೋಡಿ ಟೆಕ್ನಿಕಲ್ ಸೆಲ್‌ಗೆ ತೆರಳಿ ಸುಮಾರು ಎರಡು ಗಂಟೆಗಳ ಕಾಲ ಲೋಹಿತ್‌ನನ್ನು ವಿಚಾರಣೆ ನಡೆಸಿದ್ದಾರೆ.ಪ್ರಕರಣವನ್ನು “ಮಾನಸಿಕ ಅಸ್ವಸ್ಥನ ಕೃತ್ಯ” ಎಂದು ಸುಲಭವಾಗಿ ಪರಿಗಣಿಸಬಾರದು ಎಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸಲಹೆ ನೀಡಿದ ಹಿನ್ನೆಲೆ ತನಿಖೆಯನ್ನು ಗಂಭೀರವಾಗಿ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಸದ್ಯ ಲೋಹಿತ್ ಕೋರಮಂಗಲ ಪೊಲೀಸ್ ಕಸ್ಟಡಿಯಲ್ಲಿ ಇದ್ದು, ಕಳೆದ ಎರಡು ದಿನಗಳಿಂದ ಎನ್‌ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ಕೂಡ ಮೂರು ಗಂಟೆಗಳ ಕಾಲ ಎನ್‌ಐಎ ತಂಡ ಲೋಹಿತ್‌ನನ್ನು ಪ್ರಶ್ನಿಸಿದೆ.
ಪ್ರಕರಣದ ಬೆನ್ನತ್ತಿರುವ ತನಿಖಾ ತಂಡಗಳು ಕನಕಪುರ ರಸ್ತೆಯ ಸುಮಾರು 200ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿವೆ. ಆದರೂ ಜಿಲೆಟಿನ್ ಕಡ್ಡಿಗಳನ್ನು ಇಟ್ಟವರ ಸ್ಪಷ್ಟ ಸುಳಿವು ಇನ್ನೂ ಸಿಕ್ಕಿಲ್ಲ. ಸಿಸಿಟಿವಿ ಪರಿಶೀಲನೆ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಹಲವರನ್ನು ಕರೆಸಿ ವಿಚಾರಣೆ ನಡೆಸಲಾಗಿದೆ.
For More Updates Join our WhatsApp Group :




