ಬಿಹಾರ ಚುನಾವಣೆಗೆ ಮತ ಚಲಾಯಿಸಲು ಕರ್ನಾಟಕದ ಬಿಹಾರಿಗಳಿಗೆ 3 ದಿನ ರಜೆ ನೀಡಿ: DK ಶಿವಕುಮಾರ್ ಮನವಿ.

ಬಿಹಾರ ಚುನಾವಣೆಗೆ ಮತ ಚಲಾಯಿಸಲು ಕರ್ನಾಟಕದ ಬಿಹಾರಿಗಳಿಗೆ 3 ದಿನ ರಜೆ ನೀಡಿ: DK ಶಿವಕುಮಾರ್ ಮನವಿ.

ಬೆಂಗಳೂರು: ಇದೇ ನವೆಂಬರ್ 6 ಹಾಗೂ 11ರಂದು ಎರಡು ಹಂತದಲ್ಲಿ ಬಿಹಾರ ವಿಧಾನಸಭೆ ಚುನಾವಣೆ  ನಡೆಯಲಿದ್ದು, ಈಗಾಗಲೇ ಗೆಲುವಿಗಾಗಿ ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಿಗಿದ್ದಾರೆ. ಇನ್ನು ಇತ್ತ ಬೆಂಗಳೂರಿನಲ್ಲಿರುವ ಕೆಲಸ ಮಾಡಿಕೊಂಡಿರುವ ಬಿಹಾರಿಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಮತಯಾಚನೆ ಮಾಡಿದ್ದಾರೆ. ಅಲ್ಲದೇ ಬಿಹಾರಿಗಳು ತಮ್ಮ ರಾಜ್ಯಕ್ಕೆ ಹೋಗಿ ಮತದಾನ ಮಾಡಿಬರಲು ಮೂರು ದಿನ ರಜೆ ನೀಡಬೇಕೆಂದು ಆಯಾ ಸಂಸ್ಥೆ, ಕಂಪನಿಗಳಿಗೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, 2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ, ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಕೆಲಸ ಮಾಡುತ್ತಿರುವ ಬಿಹಾರದ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಂಪನಿಗಳು, ಉದ್ಯಮಿದಾರರು, ಹೋಟೆಲ್‌ಗಳು ಮತ್ತು ಗುತ್ತಿಗೆದಾರರು ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡಬೇಕು. ಈ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕರಿಸಬೇಕೆಂದು ವಿನಂತಿ ಮಾಡಿಕೊಂಡಿದ್ದಾರೆ.

ಇನ್ನು ಬಿಹಾರ ವಿಧಾನಸಭೆ 243 ಸ್ಥಾಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಚುನಾವಣೆಯು ಈ ಬಾರಿ ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ರಾಜಕಾರಣಿಗಳು ಸಹ ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ.

ಮೊನ್ನೆ ಭಾನುವಾರ ಅಷ್ಟೇ ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನು ಡಿಜೆ ಶಿವಕುಮಾರ್ ಭೇಟಿ ಮಾಡಿದ್ದು, ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ ಹಾಗೂ ನಿಮ್ಮ ಸಂಬಂಧಿಕರಿಗೂ ನಮಗೆ ಮತ ನೀಡುವಂತೆ ಮನವಿ ಮಾಡಿದ್ದರು.  ಅಲ್ಲದೇ ಇದೇ ವೇಳೆ ಬೆಂಗಳೂರಿನಲ್ಲೊಂದು ಬಿಹಾರಿಗಳಿಗಾಗಿ ಸಮುದಾಯ ಭವನ ನಿರ್ಮನಿಸಿಕೊಡುವುದಾಗಿ ಭರವಸೆ ನೀಡಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *