ಗೋವಾ ನೈಟ್ ಕ್ಲಬ್ ದುರಂತ.

ಗೋವಾ ನೈಟ್ ಕ್ಲಬ್ ದುರಂತ.

ಥೈಲ್ಯಾಂಡ್ನಿಂದ ದೆಹಲಿಗೆ ಕರೆತಂದ ಲೂತ್ರಾ ಸಹೋದರರು.

ನವದೆಹಲಿ : ಗೋವಾದ ಬಿರ್ಚ್​ ಬೈ ರೋಮಿಯೋ ನೈಟ್​ ಕ್ಲಬ್ ಮಾಲೀಕರಾದ ಸೌರಭ್ ಹಾಗೂ ಗೌರವ್ ಲೂತ್ರಾರನ್ನು ಪೊಲೀಸರು ಥೈಲ್ಯಾಂಡ್​ನಿಂದ ದೆಹಲಿಗೆ ಕರೆತಂದಿದ್ದಾರೆ. ನೈಟ್​ಕ್ಲಬ್​ನಲ್ಲಿ ಅಗ್ನಿ ದುರಂತ ಸಂಭವಿಸಿ 25 ಮಂದಿ ಪ್ರಾಣ ಕಳೆದುಕೊಂಡಿದ್ದರು. ನಂತರ ಇಬ್ಬರು ಥೈಲ್ಯಾಂಡ್​ಗೆ ಪಲಾಯನ ಮಾಡಿದ್ದರು. ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.

ಕ್ಲಬ್ ಒಳಗೆ ಬಳಸಿದ ಪಟಾಕಿಗಳು ಬೆಂಕಿಗೆ ಕಾರಣವಾಗಿರಬಹುದು ಎಂದು ಸೂಚಿಸುತ್ತವೆ. ಹೆಚ್ಚಿನ ಜನರು ಒಳಗೆ ಸಿಲುಕಿಕೊಂಡ ನಂತರ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಲೂಥ್ರಾ ಸಹೋದರರನ್ನು (ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿತ್ತು. ವಿದೇಶಾಂಗ ಸಚಿವಾಲಯಕ್ಕೆ ಕ್ರಮ ಕೈಗೊಳ್ಳುವಂತೆ ಗೋವಾ ಸರ್ಕಾರ  ವಿನಂತಿಸಿದ ಬಳಿಕ ಲೂತ್ರಾ ಸಹೋದರರಿಬ್ಬರ ಪಾಸ್‌ಪೋರ್ಟ್ ರದ್ದುಗೊಳಿಸಲಾಗಿತ್ತು.

ಈವರೆಗೆ ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಲಾಗಿದ್ದು, ಗೋವಾ ಸರ್ಕಾರದ ಆದೇಶದಂತೆ ಲೂತ್ರಾ ಸಹೋದರರ ಒಡೆತನದಲ್ಲಿದ್ದ ಇನ್ನೊಂದು ನೈಟ್‌ಕ್ಲಬ್‌ನ್ನು ನೆಲಸಮಗೊಳಿಸಲಾಗಿದೆ. ಇನ್ನೂ ಈಗಾಗಲೇ ಈ ಸಂಬಂಧ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ, ಗೋವಾ ಸಿಎಂ ಆದೇಶಹೊರಡಿಸಿದ್ದಾರೆ.

ವಿಮಾನ ರದ್ದತಿ ಮತ್ತು ವಿಳಂಬದಿಂದಾಗಿ ದೇಶಾದ್ಯಂತ ವಿಮಾನಯಾನ ಸಂಸ್ಥೆ ಸಂಕಷ್ಟಕ್ಕೆ ಸಿಲುಕಿದ್ದಾಗ ಇಂಡಿಗೋ ವಿಮಾನದಲ್ಲಿ ಅವರು ಪರಾರಿಯಾಗಿರುವುದು ಅನುಮಾನಕ್ಕೆ ಕಾರಣವಾಗಿತ್ತು. ಡಿಸೆಂಬರ್ 7 ರಂದು ಬೆಳಗಿನ ಜಾವ 1.17 ಕ್ಕೆ ಸಹೋದರರು ಥೈಲ್ಯಾಂಡ್ಗೆ ವಿಮಾನ ಟಿಕೆಟ್ಗಳನ್ನು ಬುಕ್ ಮಾಡಿದ್ದರು.

ಆ ಸಮಯದಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಗೋವಾದ ತಮ್ಮ ನೈಟ್ಕ್ಲಬ್ನಲ್ಲಿ ಬೆಂಕಿಯನ್ನು ನಂದಿಸಲು ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದರು. ಬಂಧನಕ್ಕೆ ಹೆದರಿ ಸಹೋದರರು ಭಾರತಕ್ಕೆ ಮರಳಲು ನಿರಾಕರಿಸಿದ್ದರು ಮತ್ತು ಬಂಧನ ಪೂರ್ವ ಜಾಮೀನು ಕೋರಿ ದೆಹಲಿಯ ರೋಹಿಣಿ ನ್ಯಾಯಾಲಯವನ್ನು ಸಂಪರ್ಕಿಸಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *