NCERT ನಿಂದಉಚಿತಆನ್ಲೈನ್ಕೋರ್ಸ್ಆರಂಭ.!
11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯನ್ನು ಸುಲಭ ಹಾಗೂ ಸರಳಗೊಳಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು ಈಗ ಮಹತ್ವದ ಉಪಕ್ರಮವನ್ನು ಕೈಗೊಂಡಿದೆ. ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ‘ಸ್ವಯಂ’ (SWAYAM) ಪೋರ್ಟಲ್ ಮೂಲಕ ಉಚಿತ ಆನ್ಲೈನ್ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದೆ. ಈ ಉಪಕ್ರಮವು ವಿದ್ಯಾರ್ಥಿಗಳಿಗೆ ವಿಷಯಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ನೀಡುವುದಲ್ಲದೆ, ಮನೆಯಿಂದಲೇ ತಮ್ಮ ಪರೀಕ್ಷಾ ಸಿದ್ಧತೆಯನ್ನು ಬಲಪಡಿಸಲು ಮತ್ತು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಲು ಉತ್ತಮ ಅವಕಾಶವನ್ನು ಕಲ್ಪಿಸಿಕೊಡುತ್ತದೆ.
ಈ ವಿಶೇಷ ಕಾರ್ಯಕ್ರಮದ ಅಡಿಯಲ್ಲಿ ಒಟ್ಟು 11 ಪ್ರಮುಖ ವಿಷಯಗಳಲ್ಲಿ ಕೋರ್ಸ್ಗಳನ್ನು ನೀಡಲಾಗುತ್ತಿದೆ. ಇದರಲ್ಲಿ ಲೆಕ್ಕಶಾಸ್ತ್ರ, ಜೀವಶಾಸ್ತ್ರ, ರಸಾಯನಶಾಸ್ತ್ರ, ಅರ್ಥಶಾಸ್ತ್ರ, ಭೂಗೋಳಶಾಸ್ತ್ರ, ಭೌತಶಾಸ್ತ್ರ, ಗಣಿತ, ಮನೋವಿಜ್ಞಾನ, ಸಮಾಜಶಾಸ್ತ್ರ, ವ್ಯವಹಾರ ಅಧ್ಯಯನ ಮತ್ತು ಇಂಗ್ಲಿಷ್ ವಿಷಯಗಳು ಒಳಗೊಂಡಿವೆ. ಪ್ರತಿಯೊಂದು ಕೋರ್ಸ್ ಅನ್ನು 21 ವಾರಗಳ ಅವಧಿಗೆ ವಿನ್ಯಾಸಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಯಾವುದೇ ಹೆಚ್ಚಿನ ಮಾನಸಿಕ ಒತ್ತಡವಿಲ್ಲದೆ ತಮ್ಮದೇ ಆದ ವೇಗದಲ್ಲಿ ಅಧ್ಯಯನ ಮಾಡಲು ಇಲ್ಲಿ ಅವಕಾಶವಿದೆ. ಇದು ವಿದ್ಯಾರ್ಥಿಗಳಿಗೆ ಪಠ್ಯದ ಪ್ರತಿಯೊಂದು ಅಂಶವನ್ನು ವಿವರವಾಗಿ ಅರ್ಥಮಾಡಿಕೊಳ್ಳಲು ನೆರವಾಗಲಿದೆ.
ಅರ್ಜಿ ಸಲ್ಲಿಸಲು ಆಸಕ್ತಿಯಿರುವ ವಿದ್ಯಾರ್ಥಿಗಳು ಮೊದಲು ಸ್ವಯಂ (SWAYAM) ಪೋರ್ಟಲ್ಗೆ ಭೇಟಿ ನೀಡಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಅಲ್ಲಿ ತಮಗೆ ಇಷ್ಟವಾದ ವಿಷಯವನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ಸಾಮಗ್ರಿಗಳನ್ನು ಉಚಿತವಾಗಿ ಪಡೆಯಬಹುದು. ನಿಗದಿತ ಕಾರ್ಯಯೋಜನೆಗಳು ಮತ್ತು ಪರೀಕ್ಷೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತು ಉನ್ನತ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಎನ್ಸಿಇಆರ್ಟಿಯ ಈ ಯೋಜನೆಯು ಅತ್ಯುತ್ತಮ ವೇದಿಕೆಯಾಗಿದೆ.
For More Updates Join our WhatsApp Group :




