ಪ್ರಯಾಣಿಕರಿಗೆ ಸಿಹಿ ಸುದ್ದಿ : UPI ಮೂಲಕ KSRTC ಟಿಕೆಟ್‌ ಖರೀದಿಗೆ ಅವಕಾಶ

UPI

ಬೆಂಗಳೂರು: ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯು ತನ್ನ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡುತ್ತಿದ್ದು, UPI ಮೂಲಕ ಪಾವತಿ ಮಾಡಿ ಟಿಕೆಟ್ ಖರೀದಿ ಮಾಡುವ ಅವಕಾಶ ಒದಗಿಸಲು ಮುಂದಾಗಿದೆ.

ಈ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಜೂನ್ 25 ರಿಂದ ನಾಲ್ಕು ಡಿಪೋಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳ (ಇಟಿಎಂ) ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲಿದೆ,

ಎಲ್ಲಾ ಕಂಡಕ್ಟರ್‌ಗಳಿಗೆ ತರಬೇತಿ ನೀಡಿದ ನಂತರ ಕೆಲವೇ ವಾರಗಳಲ್ಲಿ ಎಲ್ಲಾ ಬಸ್‌ಗಳಲ್ಲಿ ವ್ಯವಸ್ಥೆ ಜಾರಿಗೆ ಬರಲಿದೆ. ಸಾರಿಗೆ ನಿಗಮವು ಪ್ರತಿ ಸಾಧನಕ್ಕೆ ತಿಂಗಳಿಗೆ 645 ರೂಪಾಯಿ ಬಾಡಿಗೆಯಂತೆ 10,245 ಇಟಿಎಂಗಳನ್ನು ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

ಕೆಎಸ್‌ಆರ್‌ಟಿಸಿ ಎಂಡಿ ಅನ್ಬು ಕುಮಾರ್ ಮಾತನಾಡಿ, ಪ್ರಾಯೋಗಿಕ ಯೋಜನೆ ಯಶಸ್ವಿಯಾದ ಬಳಿಕ ಈ ತಿಂಗಳ ಅಂತ್ಯದಲ್ಲಿ ಎಲ್ಲಾ ಬಸ್ ಗಳಲ್ಲಿ ವ್ಯವಸ್ಥೆ ಜಾರಿಯಾಗಲಿದೆ. ಇದರಿಂದೆ ಚಿಲ್ಲರೆ ಸಮಸ್ಯೆ ಎದುರಾಗುವುದಿಲ್ಲ ನಿರ್ವಾಹಕರು ಚಿಲ್ಲರೆ ನೀಡಲಿಲ್ಲ ಎಂಬ ದೂರುಗಳು ಕೂಡ ಕಡಿಮೆಯಾಗಲಿದೆ. ETM ಗಳ ಮೂಲಕ, ಪ್ರಯಾಣಿಕರು GPay, PhonePe, Paytm ಮತ್ತು ಅವರ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಪಪಾವತಿಸಿ, ಟಿಕೆಟ್ ಖರೀದಿ ಮಾಡಬಹುದು ಎಂದು ಹೇಳಿದ್ದಾರೆ

Leave a Reply

Your email address will not be published. Required fields are marked *