ಸಣ್ಣ ನೇಕಾರರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಗುಡ್ ನ್ಯೂಸ್..!!

ಬೆಂಗಳೂರು: ಕರ್ನಾಟಕ ಜನತೆಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಘೋಷಿಸಿದೆ.

ಸಿದ್ದರಾಮಯ್ಯ

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೇಕಾರರ ನಿಯೋಗದ ಜತೆ ಚರ್ಚಿಸಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದ್ದಾರೆ.

ಈ ಕುರಿತು ಹಿಂದೆ ನೇಕಾರರಿಗೆ ನೀಡಿದ ಭರವಸೆಯಂತೆ ಮನ್ನಾ ಮಾಡಲಾಗುವುದು ಎಂದರು. ಇದರಿಂದ ಸಣ್ಣ ನೇಕಾರರಿಗೆ ದೊಡ್ಡ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿ.ಎಸ್.ಎನ್.ಕುಮಾರ್ ಉಪಸ್ಥಿತರಿದ್ದರು.1 hp ವಿದ್ಯುತ್ ಎಂದರೆ ಸರಿಸುಮಾರು 746 ವ್ಯಾಟ್ ಅಥವಾ 0.746 ಕಿಲೋವ್ಯಾಟ್.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *