ಬೆಂಗಳೂರು, : ರಾಜ್ಯ ಸರ್ಕಾರ ದಿಂದ ಶಾಲಾ ಮಕ್ಕಳಿಗೆ 6 ದಿನ ಮೊಟ್ಟೆ ವಿತರಣೆ ಮಾಡುವುದಾಗಿದೆ ಇತ್ತೀಚೆಗಷ್ಟೇ ಹೇಳಲಾಗಿತ್ತು. ಇದೀಗ ಈ ಯೋಜನೆ ಇಂದಿನಿಂದ ಅಂದರೆ, ಸೆಪ್ಟೆಂಬರ್ 25ರಿಂದ ಜಾರಿಗೆ ತರಲಾಗಿದೆ. ಹಾಗಾದರೆ ಈ ಯೋಜನೆಯ ಲಾಭ ಯಾವ್ಯಾವ ತರಗತಿ ಮಕ್ಕಳಿಗೆ ಸಿಗಲಿದೆ ಎನ್ನುವ ಮಾಹಿತಿ ಇಲ್ಲಿದೆ ನೊಡಿ
ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿಯ 56,00,000 ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಸೆಪ್ಟೆಂಬರ್ 25ರಿಂದ ಅಂದರೆ ಇಂದಿನಿಂದ 6 ದಿನ ಮೊಟ್ಟೆ ಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಯಾದಗಿರಿ ಜಿಲ್ಲೆ ಅರಕೇರಾ ಕೆ.ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಬೇಯಿಸಿದ ಮೊಟ್ಟೆ ನೀಡುವ ಮೂಲಕ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಯೋಜನೆಗೆ ಚಾಲನೆ ನೀಡಿದರು. ಸರ್ಕಾರ ಎರಡು ದಿನ ಮೊಟ್ಟೆ ಪೂರೈಸಲಿದೆ. ಇನ್ನು ಉಳಿದ ನಾಲ್ಕು ದಿನ ಅಜೀಂ ಪ್ರೇಮ್ಜಿ ಫೌಂಡೇಷನ್ ಕೊಡಲಿದೆ. ಮೂರು ವರ್ಷ ಮೊಟ್ಟೆ ನೀಡಲು 1,500 ಕೋಟಿ ನೆರವು ನೀಡಲು ಶಾಲಾ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ಜಿ ಫೌಂಡೇಷನ್ ನಡುವೆ ಜುಲೈನಲ್ಲಿ ಒಪ್ಪಂದ ಆಗಿತ್ತು. ಇದೀಗ ಈ ಯೋಜನೆ ಜಾರಿಗೆ ಬಂದಿದೆ.