ಬೆಂಗಳೂರು : ವಾರದೊಳಗೆ ರೈತರ ಖಾತೆಗೆ ಬೆಳೆ ಪರಿಹಾರ ಜಮಾ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್ ಹಾನಿಯಾಗಿದ್ದರೆ, ತೋಟಗಾರಿಕಾ ಬೆಳೆ 2,294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ.
ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು.
ಪ್ರಸ್ತುತ ರಾಜ್ಯ ಸರ್ಕಾರದ ಬಳಿ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳು ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ