ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದ್ದು, ಮುಂದಿನ ತಿಂಗಳಿನಿಂದೇ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯಡಿ ಹಣ ಜಮೆ ಮಾಡಲು ನಿರ್ಧರಿಸಿದೆ.
ಹೌದು, ರಾಜ್ಯ ಸರ್ಕಾರದ ತೃತೀಯ ಲಿಂಗಿಗಳಿಗೂ ಕೂಡ ಗೃಹಲಕ್ಷ್ಮಿ ಹಣ ನೀಡೋದಕ್ಕೆ ಮುಂದಾಗಿದೆ. ಈಗಾಗಲೇ ಅರ್ಜಿ ಸಹ ಸಿದ್ಧವಾಗುತ್ತಿದ್ದು, ಜಿಲ್ಲಾಧಿಕಾರಿಗಳು ನೀಡಿರುವ ಗುರುತಿನ ಚೀಟಿ ನೀಡಿ ಗೃಹಲಕ್ಷ್ಮಿಹಣಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಇದೇ ತಿಂಗಳ ಕೊನೆಯಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.ಅರ್ಜಿ ಸಲ್ಲಿಸಿದ ತೃತೀಯ ಲಿಂಗಿಗಳಿಗೆ ಮುಂದಿನ ತಿಂಗಳಿನಿಂದ ಖಾತೆಗೆ ಹಣ ಜಮಾ ಆಗಲಿದೆ ಎಂದು ಹೇಳಲಾಗಿದೆ.
ಇನ್ನು ರಾಜ್ಯದಲ್ಲಿ 1.20 ಕೋಟಿಗೂ ಅಧಿಕ ಮಂದಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ 2,000 ರೂ. ಪಡೆಯುತ್ತಿದ್ದು, ಇನ್ಮುಂದೆ ರಾಜ್ಯದ 40 ಸಾವಿರಕ್ಕೂ ಹೆಚ್ಚು ತೃತೀಯ ಲಿಂಗಿಗಳ ಖಾತೆಗೂ ಗೃಹ ಲಕ್ಷ್ಮಿ ಹಣ ಖಾತೆಗೆ ಜಮಾ ಆಗಲಿದೆ.