ಬೆಂಗಳೂರು : ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಡಿ ಸರ್ಕಾರದ ಸೇವಾ ಸಿಂಧು ಪೋರ್ಟ್ಲ್https://sevasindhu.karnataka.gov.inಅಂತರಜಾಲ ಜಾಲತಾಣದಲ್ಲಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್https://sevasindhu.karnataka.gov.inನಲ್ಲಿ ಲಭ್ಯವಿರುತ್ತದೆ. ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್. ಬೆಂಗಳೂರು ಒನ್ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೆ.21 ರವರೆಗೆ ಅರ್ಜಿ ಸಲ್ಲಿಸುವ್ಯದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ತಿಳಿಸಿದೆ.