ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತಂಬಾಕು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಬಾರಿ ಮಳೆ ಹಾಗೂ ಇಳುವರಿ ಕಡಿಮೆ ಬಂದು ರೈತರು ಸಂಕಷ್ಟದಲ್ಲಿ ಇದ್ದಾರೆ. ಈಗ ಕೇಂದ್ರ ಸರ್ಕಾರವು ತಂಬಾಕು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಅಂದಾಜು 70000ಕ್ಕೂ ಹೆಚ್ಚು ತಂಬಾಕು ಬೆಳೆಗಾರರಿಗೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ಕೊಟ್ಟಿದೆ. ತಂಬಾಕು ಬೆಳೆಗಾರರು ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿ ಮಾಡದೆ, ಹಾಗೂ ಅನಧಿಕೃತ ತಂಬಾಕನ್ನು ಸಹ ತಂಬಾಕು ಮಂಡಳಿಯ ಹರಾಜಿನ ಮೂಲಕ ಮಾರಾಟ ಮಾಡುವುದಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಈ ನಿರ್ಧಾರದ ಮೂಲಕ ತಂಬಾಕು ಮಂಡಳಿಯ ಹರಾಜು ವೇದಿಕೆಗಳಲ್ಲಿ ನೋಂದಾಯಿತ ಬೆಳೆಗಾರರಿಂದ ಹೆಚ್ಚುವರಿ ತಂಬಾಕು ಮತ್ತು ನೊಂದಾಯಿಸದ ಬೆಳೆಗಾರರಿಂದ ಅನಧಿಕೃತ ತಂಬಾಕು ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಹಾಗೆಯೇ ಯಾವುದೇ ಹೆಚ್ಚುವರಿ ಸೇವಾ ಶುಲ್ಕಗಳಿಲ್ಲದೆ ರೈತರು ನ್ಯಾಯಯುತವಾಗಿ ಮಾರುಕಟ್ಟೆ ಬೆಲೆಯನ್ನು ಪಡೆಯುವಂಥಾಗಿದೆ.
ಕರ್ನಾಟಕದ ತಂಬಾಕು ಬೆಳೆಗಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್.
