ಬಜೆಟ್ ಮಧ್ಯೆ ಸರ್ಕಾರಕ್ಕೆ ತಲೆಬಿಸಿ: ಅತಿಥಿ ಉಪನ್ಯಾಸಕರು ಹೋರಾಟಕ್ಕೆ ಸಜ್ಜು.

ಬಜೆಟ್ ಮಧ್ಯೆ ಸರ್ಕಾರಕ್ಕೆ ತಲೆಬಿಸಿ: ಅತಿಥಿ ಉಪನ್ಯಾಸಕರು ಹೋರಾಟಕ್ಕೆ ಸಜ್ಜು.

ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದರೆ ಬೀದಿಗೆ ಇಳಿಯುವ ಎಚ್ಚರಿಕೆ.

ಹುಬ್ಬಳ್ಳಿರಾಜ್ಯದಲ್ಲಿ ಇತ್ತೀಚೆಗೆ ನೇಮಕಾತಿಗಾಗಿ ಆಗ್ರಹಿಸಿ ಧಾರವಾಡದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿದೆ. ನೇಮಕಾತಿ ಮಾಡಿಕೊಳ್ಳದಿದ್ದರೆ ಮತ್ತೊಂದು ಸುತ್ತಿನ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದರ ಜೊತೆಗೆ ಸಾಲು ಸಾಲು ಹೋರಾಟಗಳನ್ನು ನಡೆಸಲು ಅನೇಕರು ಮುಂದಾಗಿದ್ದಾರೆ. ಇದರ ನಡುವೆ ಕಾಲೇಜು ಅತಿಥಿ ಉಪನ್ಯಾಸಕರು ಸರ್ಕಾರದ ವಿರುದ್ಧ ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡದ ಎಚ್ಚರಿಕೆ ನೀಡಿದ್ದಾರೆ.

ಕಳೆದ ತಿಂಗಳಷ್ಟೇ ಧಾರವಾಡದಲ್ಲಿ ಸರ್ಕಾರಿ ನೇಮಕಾತಿಗಾಗಿ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ವಿದ್ಯಾರ್ಥಿಗಳು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿದ್ದರು. ಸರ್ಕಾರ ಆದಷ್ಟು ಬೇಗನೆ ನೇಮಕಾತಿ ಮಾಡಿಕೊಳ್ಳೋದಾಗಿ ಹೇಳಿದೆ. ಆದರೆ ನೇಮಕಾತಿಗಾಗಿ ನೋಟಿಫಿಕೇಶನ್ ಹೊರಡಿಸದಿದ್ದರೆ ಮತ್ತೊಂದು ಸುತ್ತಿನ ಹೋರಾಟ ಮಾಡೋದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದರ ನಡುವೆ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ ಶುರುವಾಗುವ ಸಾಧ್ಯತೆಯಿದೆ.

ನಮ್ಮ ಬೇಡಿಕೆಗೆ ಸ್ಪಂದಿಸಬೇಕು: ಇಲ್ಲದಿದ್ದರೆ ಹೋರಾಟ

ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ತಮ್ಮ ಸೇವಾಭದ್ರತೆಗಾಗಿ ಆಗ್ರಹಿಸಿ ಮತ್ತೊಂದು ಸುತ್ತಿನ ಹೋರಾಟ ನಡೆಸಲು ಮುಂದಾಗಿದ್ದಾರೆ. ಈ ವರ್ಷ ಯುಜಿಸಿ ನಿಯಮಗಳ ನೆಪ ಹೇಳಿ 6 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಂಡಿಲ್ಲ. ಅವರು ಮೂರು ತಿಂಗಳಿಂದ ಕೆಲಸವಿಲ್ಲದೆ ಖಾಲಿ ಕೂತಿದ್ದಾರೆ. ಕೂಡಲೇ ಅವರನ್ನು ನೇಮಕಾತಿ ಮಾಡಿಕೊಳ್ಳಬೇಕು ಅಂತ ಆಗ್ರಹಿಸಿದ್ದಾರೆ. ಕಳೆದ 20 ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿದ್ದೇವೆ. ಇದೀಗ ಯುಜಿಸಿ ನಿಯಮಗಳ ನೆಪದಲ್ಲಿ ತಮ್ಮನ್ನು ಕೆಲಸಕ್ಕೆ ತಗೆದುಕೊಂಡಿಲ್ಲ.

ಒಂದು ಕಡೆ ನೇಮಕಾತಿಗಾಗಿ ದೊಡ್ಡ ಮಟ್ಟದ ಹೋರಾಟ ನಡೆದಿದ್ದರೆ, ಇನ್ನೊಂದಡೆ ಮತ್ತೊಮ್ಮೆ ಸರ್ಕಾರದ ವಿರುದ್ದ ಹೋರಾಟಕ್ಕೆ ಅತಿಥಿ ಉಪನ್ಯಾಸಕರು ಮುಂದಾಗಿದ್ದಾರೆ. ಹೀಗಾಗಿ ಸರ್ಕಾರ ಈ ನಿಟ್ಟಿನಲ್ಲಿ ಸಾಧಕ ಭಾದಕಗಳನ್ನು ನೋಡಿಕೊಂಡು ಕ್ರಮಕೈಗೊಳ್ಳಬೇಕಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *