ಸರ್ಕಾರಿನೌಕರರಿಗೆ ಸರ್ಕಾರದಿಂದ ಖಡಕ್ ವಾರ್ನಿಂಗ್: ಈ ನಿಯಮ ಪಾಲನೆ ಕಡ್ಡಾಯ!

ಸರ್ಕಾರಿನೌಕರರಿಗೆ ಸರ್ಕಾರದಿಂದ ಖಡಕ್ ವಾರ್ನಿಂಗ್: ಈ ನಿಯಮ ಪಾಲನೆ ಕಡ್ಡಾಯ!

ಕರ್ನಾಟಕ: ಕರ್ನಾಟಕ ಸರ್ಕಾರವು ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆಯನ್ನು ಕೊಟ್ಟಿದೆ. ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಹಾಗೂ ಸರ್ಕಾರಿ ನೌಕರರ ಕಾರ್ಯ ವೈಖರಿಯ ಬಗ್ಗೆ ಹದ್ದಿನ ಕಣ್ಣು ಇರಿಸಿರುವ ಸರ್ಕಾರವು ಇದೀಗ ಮತ್ತೊಂದು ಪ್ರಮುಖ ಎಚ್ಚರಿಕೆಯ ಸುತ್ತೋಲೆಯನ್ನು ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಕೆಲಸದ ಕಾರ್ಯವೈಖರಿಯನ್ನು ಬದಲಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಕೆಲವು ಸರ್ಕಾರಿ ನೌಕರರು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುವುದಿಲ್ಲ. ಹೆಚ್ಚು ಬ್ರೇಕ್ಗಳನ್ನು ತೆಗೆದುಕೊಳ್ಳುತ್ತಾರೆ ತುಂಬಾ ತಡವಾಗಿ ಕೆಲಸ ಮಾಡುತ್ತಾರೆ ಎನ್ನುವ ಆರೋಪ ಸಾರ್ವಜನಿಕ ವಲಯದಲ್ಲಿ ಇದೆ. ಇದೀಗ ಸರ್ಕಾರವೇ ಈ ಆರೋಪಗಳಿಗೆ ಬ್ರೇಕ್ ಹಾಕುವುದಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ಸರ್ಕಾರಿ ನೌಕರರಿಗೆ ಕೆಲಸಕ್ಕೆ ಹಾಜರಾಗುವ ವಿಷಯಕ್ಕೆ ಸಂಬಂಧಿಸಿದಂತೆ ಹೊಸ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅಲ್ಲದೇ ಈ ಸುತ್ತೋಲೆಯನ್ನು ಗಂಭೀರವಾಗಿ ಪರಿಗಣಿಸುವಂತೆಯೂ ಸೂಚನೆ ನೀಡಲಾಗಿದೆ.

ಹೌದು ಕರ್ನಾಟಕದ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಸರ್ಕಾರವು ಒಂದಿಲ್ಲೊಂದು ಅಪ್ಡೇಟ್ಗಳನ್ನು ಕೊಡುತ್ತಿದೆ. ಇದೀಗ ಕೆಲಸಕ್ಕೆ ಸರಿಯಾಗಿ / ಸಮಯಕ್ಕೆ ಸರಿಯಾಗಿ ಬರಬೇಕು. ತಡವಾಗಿ ಕೆಲಸಕ್ಕೆ ಬರುವವರ ಮೇಲೆ ಕ್ರಮ ತೆಗೆದುಕೊಳ್ಳುವ ಮುನ್ನೆಚ್ಚರಿಕೆಯನ್ನು ಸಹ ಕೊಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರ ಕಾರ್ಯವೈಖರಿಯನ್ನು ಪರಿಶೀಲನೆ ಮಾಡುವುದಕ್ಕೆ ಸಂಬಂಧಿಸಿದಂತೆ ಎಐ ತಂತ್ರಜ್ಞಾನವನ್ನೂ ಬಳಸುವುದಾಗಿಯೂ ಹೇಳಲಾಗಿತ್ತು. ಈ ರೀತಿ ಇರುವಾಗಲೇ ಪ್ರಮುಖ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅದೇನು ಅಂತ ನೋಡೋಣ. ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರು ತಮ್ಮ ಕರ್ತವ್ಯದ ಸಮಯದಲ್ಲಿ ಅನುಸರಿಸಬೇಕಾದ ಹತ್ತು ಪ್ರಮುಖ ವಿಷಯಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವಿವರವಾದ ಹಾಗೂ ಸುದೀರ್ಘ ಸುತ್ತೋಲೆಯನ್ನು ಹೊರಡಿಸಿದೆ. ಅಲ್ಲದೇ ಅಧಿಕಾರಿಗಳು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಈ ನಿಯಮಗಳನ್ನು ಉಲ್ಲಂಘನೆ ಮಾಡುವವರ ಮೇಲೆ ಕ್ರಮ ತೆಗೆದುಕೊಳ್ಳುವ ಬಗ್ಗೆಯೂ ಸೂಚನೆ ನೀಡಲಾಗಿದೆ.

ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ಟೈಮ್ನಲ್ಲಿ ನಿಯಮ ಪಾಲನೆ ಮಾಡದೆ ಇರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ. ಸರ್ಕಾರಿ ನೌಕರರಿಗೆ ಪ್ರಮುಖ ಸೂಚನೆಗಳು * ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಬರುವ ಮತ್ತು ಬಿಡುವ ಸಮಯವನ್ನು ಪಾಲಿಸಬೇಕು. * ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಐಡಿ ಕಾರ್ಡ್ ಧರಿಸಿರಬೇಕು.

* ಹಿರಿಯರು ಹಾಗೂ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಅಲ್ಲದೇ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. * ಸರ್ಕಾರಿ ಉದ್ಯೋಗಿಗಳಿಗೆ ನಿಗದಿಪಡಿಸಿದ ಕೆಲಸವನ್ನು ಪೂರ್ಣಗೊಳಿಸಬೇಕು. * ಕೆಲಸದ ವಿಚಾರವಾಗಿ ಕಚೇರಿಯಿಂದ ಹೊರಗೆ ಹೋಗಬೇಕಾದಲ್ಲಿ ಚಲನವಲನ ವಹಿಯಲ್ಲಿ ಸಕಾರಣ ಬರೆಯ (ರಿಜಿಸ್ಟರ್)ಬೇಕು. * ವಿಶೇಷ ಸಂದರ್ಭಗಳಲ್ಲಿ ಮೇಲಧಿಕಾರಿಗಳ ಪೂರ್ವಾ ಅನುಮತಿ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *