ಹುಬ್ಬಳ್ಳಿ ಮರ್ಯಾದಾ ಹ* ಬಳಿಕ ಸರ್ಕಾರ ಎಚ್ಚರ.

ಹುಬ್ಬಳ್ಳಿ ಮರ್ಯಾದಾ ಹ* ಬಳಿಕ ಸರ್ಕಾರ ಎಚ್ಚರ.

ರಾಜ್ಯದಲ್ಲಿ ಹೊಸ ಕಾನೂನು ತರಲು ಚಿಂತನೆ.

ಹುಬ್ಬಳ್ಳಿ : ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಸ್ವತ ತಂದೆಯೇ ಆರು ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ರಾಜ್ಯದಲ್ಲಿ ಮರ್ಯಾದಾ ಹತ್ಯೆ  ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಕಳೆದ ರಾತ್ರಿ ಗ್ರಾಮದಲ್ಲಿ ಜಿಲ್ಲಾಡಳಿತ ಶಾಂತಿ ಸಭೆ ಕೂಡ ಮಾಡಿದೆ.

ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸಲು ಚಿಂತನೆ: ಸಿಎಂ ಸುಳಿವು

ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣ ರಾಜ್ಯ ಮತ್ತು ದೇಶದಲ್ಲಿ ದೊಡ್ಡ ಸುದ್ದಿಯಾಗಿದೆ. ಈ ಹಿನ್ನೆಲೆಯಲ್ಲಿ ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೆ ತರಬೇಕು ಅಂತ ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿದ್ದವು. ಆದರೆ ಇದೀಗ ರಾಜ್ಯ ಸರ್ಕಾರ ಕೂಡ ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಕಳೆದ ರಾತ್ರಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಮರ್ಯಾದೆ ಹತ್ಯೆ ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಕೇವಲ ಕಾನೂನು ಜಾರಿಗೊಳಿಸಿದರೆ ಸಾಲದು, ಅದನ್ನು ಅನುಷ್ಠಾನಕ್ಕೆ ತರುವ ಕೆಲಸವಾಗಬೇಕು ಅಂತ ಹೇಳಿದ್ದಾರೆ.

ಡಿಸೆಂಬರ್ 21ರಂದು ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಬರ್ಬರ ಕೊಲೆಯಾಗಿತ್ತು. ಮಗಳು ಪ್ರೀತಿಸಿ ದಲಿತ ಸಮುದಾಯದ ಯುವಕನನ್ನು ಮದುವೆಯಾಗಿದ್ದಕ್ಕೆ ಸ್ವತ ತಂದೆಯೇ ಆರು ತಿಂಗಳ ಗರ್ಭಿಣಿಯನ್ನು ಕೊಲೆ ಮಾಡಿದ್ದ. ಈ ಘಟನೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿತ್ತು. ಒದಂಡೆ ಪ್ರೀತಿಸಿ ಮದುವೆಯಾಗಿದ್ದ ಮಾನ್ಯಾಳ ಬರ್ಬರ ಹತ್ಯೆಯಾಗಿದ್ದರೆ, ಮದುವೆಯಾಗಿದ್ದ ವಿವೇಕನಾಂದ ಕುಟುಂಬದ ಮೇಲೆ ಕೂಡ ದುಷ್ಕರ್ಮಿಗಳು ಅಟ್ಟಹಾಸ ಮೆರದಿದ್ದರು. ಘಟನೆ ನಡೆದು ಎಂಟು ದಿನವಾದರು ಕೂಡ ಗ್ರಾಮದಲ್ಲಿ ಭಯದ ವಾತಾವರಣ ಕಡಿಮೆಯಾಗಿರಲಿಲ್ಲ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *