ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಹೌದು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಶುರುವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ದಾಖಲೆಗಳ ಜೊತೆ ಬರುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇತ್ತೀಚೆಗೆ ದೂರು ದಾಖಲಾಗಿತ್ತು.ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ದೇವರಾಜು ಹಾಗೂ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಡಾಗೆ ವಂಚಿಸಿದ್ದಾರೆ ಎಂದು ದೂರಿದ್ದರು.