ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿದ ಸರ್ಕಾರ

ಪಡಿತರದಾರರಿಗೆ ದೀಪಾವಳಿ ಶಾಕ್, ಸರ್ವರ್ ಸಮಸ್ಯೆ ರೇಷನ್ ವಿತರಣೆ ಅನುಮಾನ!

ಬೆಂಗಳೂರು : ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ.ಆಗಸ್ಟ್ 10 ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. https://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾ‌ರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

Leave a Reply

Your email address will not be published. Required fields are marked *