ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರು ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ಶಾಲಾ ಶಿಕ್ಷಕರ ಪ್ರತಿಭಟನೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಶಿಕ್ಷಕರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ತರಗತಿಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಬೇಕೆಂದು ತಿಳಿಸಿದೆ.
ವಿವಿಧ ಬೇಡಿಕೆಗೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಆಗಮಿಸುವಂತೆ ಎಲ್ಲಾ ಶಿಕ್ಷಕರಿಗೆ ಪ್ರಾಥಮಿಕ ಶಿಕ್ಷಕರ ಸಂಘ ಮನವಿ ಮಾಡಿದೆ.