ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 4115 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.ಸರ್ಕಾರ ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ.
ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾನ್ಸ್ ಟೇಬಲ್, ಎಸ್ ಐ ಸೇರಿ 4115 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಖಾಲಿ ಹುದ್ದೆಗಳ ಸಂಖ್ಯೆ
1)ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ / ಡಿಎಆರ್) 2000
2)ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (SRPC ) (KSRP)
1500
3)ಪೊಲೀಸ್ ಸಬ್ಇನ್ಸ್ಪೆಕ್ಟರ್ 600
4)ಡೆಪ್ಯೂಟಿ ಸಬ್ ಇನ್ಸ್ಪೆಕ್ಟರ್ 15
ಈ ಹುದ್ದೆಗಳಿಗೆ 3 ತಿಂಗಳಿನಲ್ಲಿ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆಯಿದೆ.