ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿಯಲ್ಲಿ 88,95,361 ಮತದಾರರು: ಮಹೇಶ್ವರ್ ರಾವ್
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಮತದಾರರ ಪಟ್ಟಿಯಲ್ಲಿ ಒಟ್ಟು 88,95,361 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್* ಅವರು ತಿಳಿಸಿದರು.
ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 09 ರಂದು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿತ್ತು. ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಮಾರ್ಪಾಡುಗಳು ಮಾಡಿ ಇಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು.
ನಗರ ಪಾಲಿಕೆವಾರು ಮತದಾರರ ಸಹಾಯವಾಣಿ:
ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯ ಕುರಿತು ವ್ಯಾಪಕ ಪ್ರಚಾರಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ವಿತರಿಸಲಾಗುತ್ತಿದೆ. ಮತದಾರರ ಅನುಕೂಲಕ್ಕಾಗಿ ಐದು ನಗರ ಪಾಲಿಕೆಗಳ ಸಹಾಯವಾಣಿ ಸಂಖ್ಯೆಗಳು ಈ ಕೆಳಗಿನಂತಿವೆ:
1. ಬೆಂಗಳೂರು ಕೇಂದ್ರ : 080-22975803
2. ಬೆಂಗಳೂರು ಉತ್ತರ : 080-22975936
3. ಬೆಂಗಳೂರು ದಕ್ಷಿಣ : 9480685704
4. ಬೆಂಗಳೂರು ಪೂರ್ವ : 9480685706
5. ಬೆಂಗಳೂರು ಪಶ್ಚಿಮ : 9480685703
ಪಟ್ಟಿಗಳಲ್ಲಿ ಹೆಸರನ್ನು ಸೇರಿಸಲು ಅವಕಾಶ:
ಒಂದು ವೇಳೆ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದಿದ್ದಲ್ಲಿ ಪೂರಕ ಪಟ್ಟಿಗಳಲ್ಲಿ ಹೆಸರನ್ನು ಸೇರಿಸಿಕೂಳ್ಳಬಹುದಾಗಿರುತ್ತದೆ. ಎಲ್ಲಾ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಹಾಗೂ ದೋಷ ರಹಿತ ಮತದಾರರ ಪಟ್ಟಿಯನ್ನು ತಯಾರಿಸಲು ಅವಶ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.
ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ, ಅಪರ ಆಯುಕ್ತರು, ಜಂಟಿ ಆಯುಕ್ತರು, ಸಹಾಯಕ ಆಯುಕ್ತರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
For More Updates Join our WhatsApp Group :




