ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನೆ ರೆಡ್ಡಿಗೆ ಸಿಬಿಐ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನ ತೆರವುಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣ ಕ್ಕೆ ಸಂಬAಧಿಸಿ ಸಿಬಿಐ ವಿಶೇಷ ಕೋರ್ಟ್ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಹಲವು ಬಾರಿ ಬಳ್ಳಾರಿ ಜಿಲ್ಲೆಗೆ ಪ್ರವೇಶ ಕೋರಿ ಕೋರ್ಟ್ ಗೆ ಮನವಿ ಸಲ್ಲಿಸಲಾಗಿತ್ತಾದರೂ ನ್ಯಾಯಾಲಯ ಮನವಿಯನ್ನ ತಿರಸ್ಕಾರ ಮಾಡಿತ್ತು. ಆದರೆ ಈಗ ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿ ಆದೇಶ ಹೊರಡಿಸಿದ್ದು, ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
Related Posts
ಪದವೀಧರರಿಗೆ SEBIಯಲ್ಲಿದೆ ಉದ್ಯೋಗಾವಕಾಶ : ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ)ಯಿಂದ 97 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಫೀಸರ್ ಗ್ರೇಡ್ ‘ಎ’ ಸಹಾಯಕ ಮ್ಯಾನೇಜರ್…
ಕೈಗಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್ ಗೆ ಬೆಂಕಿ : ಪ್ರಾಣಾಪಾಯದಿಂದ ಸಿಬ್ಬಂದಿ ಪಾರು
ಕಾರವಾರ: ಕೈಗಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಕಾರವಾರ ತಾಲೂಕಿನ ವಿರ್ಜೆ ಗ್ರಾಮದ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಬಸ್ನಲ್ಲಿದ್ದ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…
ಸರ್ಕಾರ ವಜಾಗೊಳಿಸಲು ರಾಷ್ಟ್ರಪತಿಗಳಿಗೆ ಬಿಜೆಪಿ ಮನವಿ: ಬಿ ವೈ ವಿಜಯೇಂದ್ರ
ಅಧಿಕಾರಕ್ಕೆ ಬಂದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ ರಾಜ್ಯ ಸರ್ಕಾರದ ಬಗ್ಗೆ ಜನತೆ ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿರುವ…