ಖಾಲಿ Government JOB ಭರ್ತಿ ಬಗ್ಗೆ ಉದ್ಯೋಗಾಕಾಂಕ್ಷಿಗಳಿಗೆ ಗ್ರೀನ್ ಸಿಗ್ನಲ್.

ಖಾಲಿ ಸರ್ಕಾರಿ ಹುದ್ದೆ ಭರ್ತಿ ಬಗ್ಗೆ ಉದ್ಯೋಗಾಕಾಂಕ್ಷಿಗಳಿಗೆ ಗ್ರೀನ್ ಸಿಗ್ನಲ್.

ಧಾರವಾಡ ಹೈಕೋರ್ಟ್ ಆದೇಶ: ಸಿಎಂ ಭೇಟಿ ಅನುಮತಿ ನೀಡಲಿ.

ಧಾರವಾಡ : ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಬೃಹದ್ ಪ್ರತಿಭಟನೆ ನಡೆದಿತ್ತು. ಸಾವಿರಾರು ಯುವಕನ್ನೊಳಗೊಂಡ ಧರಣಿಗೆ ಅವಕಾಶ ನೀಡದ ಪೊಲೀಸರ ಕ್ರಮ ಪ್ರಶ್ನಿಸಿದ್ದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ, ಧಾರವಾಡ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ಸಂಘದ ಅರ್ಜಿ ಇತ್ಯರ್ಥಗೊಂಡಿದ್ದು, ಅರ್ಜಿದಾರರ ಮನವಿ ಪರಿಗಣಿಸಲು ಹೈಕೋರ್ಟ್ ಪೀಠ ಸೂಚಿಸಿದೆ.

ಸಿಎಂಗೆ ಮನವಿ ಸಲ್ಲಿಸಲು ಹೈಕೋರ್ಟ್​ ಅಸ್ತು

ಸಿಎಂ ಭೇಟಿ ಅನುಮತಿ ಕೊಡಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಕ್ಕೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಸಿಎಂ ಭೇಟಿಗೆ ಅವಕಾಶ ಕೊಡಿಸುವಂತೆ ನ್ಯಾ.ನಾಗಪ್ರಸನ್ನ ಅವರ ಪೀಠ ನಿರ್ದೇಶನ ನೀಡಿದ್ದು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸಂಪರ್ಕಿಸಲು ಅರ್ಜಿದಾರರಿಗೆ ಸೂಚನೆ ನೀಡಿದೆ.

ಖಾಲಿ ಹುದ್ದೆ ಭರ್ತಿಗಾಗಿ ಆಕಾಂಕ್ಷಿಗಳ ಹೋರಾಟ

ರಾಜ್ಯದಲ್ಲಿ ಸರ್ಕಾರಿ ನೌಕರಿಯ ಕನಸಿಟ್ಟುಕೊಂಡು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳುತ್ತಿರುವವರು ಸಾಕಷ್ಟು ಮಂದಿಯಿದ್ದಾರೆ. ಅದರಲ್ಲಿಯೂ ಧಾರವಾಡದಲ್ಲಿಯೇ ಅಂದಾಜು 80 ಸಾವಿರ ಉದ್ಯೋಗಾಕಾಂಕ್ಷಿಗಳಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ ಸೇರಿದಂತೆ ಹಲವಾರು ಖಾಸಗಿ ವಿವಿಗಳು ಮತ್ತು ಕೋಚಿಂಗ್ ಸೆಂಟರ್​ಗಳಿಂದ ಕೂಡಿದ ನಗರವನ್ನರಸಿ ರಾಜ್ಯದ ಹಲವು ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಪಾಲಕರಿಂದ ದೂರವಿದ್ದು, ಪಾರ್ಟ್​ ಟೈಮ್ ಕೆಲಸ ಮಾಡಿ ತಿಂಗಳ ಖರ್ಚು ನಿಭಾಯಿಸುತ್ತಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುತ್ತಾರೆ. ಹೀಗಿರುವಾಗ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ನಡೆಯದೆ ಉದ್ಯೋಗಾಂಕ್ಷಿಗಳು ಆಕ್ರೋಶದಿಂದ ಪ್ರತಿಭಟನೆಗಿಳಿದಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *