ರಾಜ್ಯದಲ್ಲಿ ಮತ್ತೆ ಮೂರು ಹೊಸ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಇದರಿಂದಾಗಿ ವೈದ್ಯಕೀಯ ಕಾಲೇಜುಗಳ ಒಟ್ಟು ಸಂಖ್ಯೆ 73ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆ ಎಸ್ಆರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ ಕಾಲೇಜು ಆರಂಭಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ ಎಂ ಸಿ) ಅನುಮತಿ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ಮೂರೂ ಕಾಲೇಜುಗಳು ಆರಂಭವಾಗಲಿವೆ.
ಈ ಕಾಲೇಜುಗಳ ಪೈಕಿ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ 150, ಪಿಇಎಸ್ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆ ಎಸ್ಆರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ ತಲಾ 100 ವೈದ್ಯಕೀಯ ಸೀಟುಗಳು ಲಭ್ಯವಾಗಲಿದ್ದು, ಇದರಿಂದಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ 12,095 ಕ್ಕೆ ಏರಿಕೆಯಾಗಿದೆ. ಈ ಮೊದಲು ಈ ಸಂಖ್ಯೆ 11,745 ಇತ್ತು.