ಇಂದು ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ: ಬಂದ ಅತಿಥಿಗಳಿಗೆ ವಿಶೇಷ ಉಡುಗೊರೆ..!!

ಮೈಸೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ ಇಂದು ಬೆಳಗ್ಗೆ ಮೈಸೂರಿನಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಆಗಮಿಸಲಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಉದ್ಘಾಟನೆ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ.

ಗೃಹ ಲಕ್ಷ್ಮಿ

ಕಾರ್ಯಕ್ರಮಕ್ಕೆ ಮಹಾರಾಜ ಕಾಲೇಜಿನ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ಹಲವಾರು ರೀತಿಯ ವೈಶಿಷ್ಟ್ಯತೆಗಳಿಂದ ಕೂಡಿರುವ ಈ ಬೃಹತ್ ವೇದಿಕೆಯ ಸಿದ್ಧತೆಯ ಕಾರ್ಯ ಮಹಾರಾಜ ಕಾಲೇಜು ಮೈದಾನದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೇಲ್ವಿಚಾರಣೆಯಲ್ಲಿ ನಡೆದಿದೆ.

ಡಿಸಿಎಂ ಸೋಮವಾರ ಸಂಜೆ ಮೈದಾನದಲ್ಲಿ ಸಿದ್ಧವಾಗುತ್ತಿರುವ ವೇದಿಕೆ ನಿರ್ಮಾಣ ಕಾರ್ಯವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದರು. ಕಾರ್ಯಕ್ರಮವು ಬೆಳಗ್ಗೆ 11:30 ಕ್ಕೆ ಆರಂಭವಾಗಲಿದೆ. ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಡಾ. ಹೆಚ್ ಸಿ ಮಹದೇವಪ್ಪ ಸೇರಿದಂತೆ ರಾಜ್ಯದ ಮಂತ್ರಿಗಳು, ಮೈಸೂರು ಭಾಗದ ನಾಲ್ಕು ಜಿಲ್ಲೆಗಳ ಶಾಸಕರು ಭಾಗವಹಿಸಲಿದ್ದಾರೆ. ರಾಜ್ಯಾದ್ಯಂತ ಸುಮಾರು 12,600 ಕಡೆ ನೇರ ಪ್ರಸಾರ ಆಗಲಿದೆ.

ಮಂಗಳವಾರ ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಪರಿಶೀಲನೆ ನಡೆಸಿದ್ದರು. ಗೃಹ ಲಕ್ಷ್ಮಿ ಕಾರ್ಯಕ್ರಮಕ್ಕೆ ಆಗಮಿಸುವ ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ಗಣ್ಯರಿಗೆ ನೀಡಲು ಡಿಸಿಎಂ ಡಿ ಕೆ ಶಿವಕುಮಾರ್ ಮೈಸೂರಿನ ಕಾವೇರಿ ಎಂಪೋರಿಯಂ, ಗೊಂಬೆ ಮನೆ ಸೇರಿದಂತೆ ಹಲವು ಮಳಿಗೆಗಳಿಗೆ ಭೇಟಿ ನೀಡಿ, ವಿಶೇಷ ಉಡುಗೊರೆಗಳನ್ನು ಆಯ್ಕೆ ಮಾಡಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯ ಕಾರ್ಯಕ್ರಮಕ್ಕೆ ಸುಮಾರು 2 ಸಾವಿರ ಬಸ್ಗಳ ಮೂಲಕ ಆಗಮಿಸುವ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಂಚಾರ ದಟ್ಟಣೆ ಆಗದ ರೀತಿಯಲ್ಲಿ, ವಿಶೇಷ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಮಾಹಿತಿ ನೀಡಿದ್ದಾರೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *