ಗೃಹಲಕ್ಷ್ಮಿ ಯೋಜನೆ || ಹಬ್ಬದ ದಿನ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಮಹಿಳೆಯರು

ಉತ್ತರ ಕನ್ನಡ : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಗೃಹಲಕ್ಷ್ನಿ ಯೋಜನೆ. ಮನೆಯ ಯಜಮಾನಿ ಹೆಸರಿನಲ್ಲಿ ತಿಂಗಳಿಗೆ 2 ಸಾವಿರ ರೂಪಾಯಿ ಕೊಡುವ ಯೋಜನೆಯಿಂದ ಹಲವು ಮಹಿಳೆಯರು ಪ್ರಯೋಜನ ಪಡೆದುಕೊಂಡಿದ್ದಾರೆ.

https://www.facebook.com/61563667196992/videos/3561887560727464

ಈ ಯೋಜನೆಯಿಂದ ಖುಷಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಬಳಿಯ ಮಹಿಳೆಯರು ಮೊನ್ನೆ ವರಮಹಾಲಕ್ಷ್ಮಿ ಹಬ್ಬದ ದಿನ ಸಿಎಂ ಸಿದ್ದರಾಮಯ್ಯನವರ ಕುರಿತು ಹಾಡು ಕಟ್ಟಿ ಸಂಭ್ರಮಿಸಿದ್ದಾರೆ. ಸಿದ್ದರಾಮಯ್ಯನವರು ಕೊಡುತ್ತಿರುವ 2 ಸಾವಿರ ರೂಪಾಯಿಯಿಂದ ನಾವು ಖುಷಿಯಿಂದ ಹಬ್ಬ ಆಚರಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮೀ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ಆಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಕಾಂಗ್ರೆಸ್ ಆಂದೋಲನ ಕಾರ್ಯಕ್ರಮದ ವೇಳೆ ಈ ಬಗ್ಗೆ ಮಾತನಾಡಿದ್ದ ಅವರು, ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಒಂದೇ ಸಾರಿ 4,000 ರೂಪಾಯಿ ಜಮೆ ಆಗುತ್ತದೆ. ಈಗಾಗಲೇ 26.65 ಲಕ್ಷ ರೂ. ಬಿಡುಗಡೆ ಆಗಿದೆ ಎಂದು ತಿಳಿಸಿದ್ದರು.

Leave a Reply

Your email address will not be published. Required fields are marked *