ಬೆಂಗಳೂರು: ಪಾವತಿಯಾಗದೇ ಇರುವ ಜೂನ್ (June) ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಜೂನ್ (June) ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು.
ಈ ಬಗ್ಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಇಲಾಖೆ ತಿಳಿಸಿದೆ.