ಗ್ರೂಪ್​ C ಹುದ್ದೆ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ KPSC

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ (ಕೆಪಿಎಸ್​ಸಿ) ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿದ್ದ ಗ್ರೂಪ್​ ಸಿಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿವಿಧ ಇಲಾಖೆಯಲ್ಲಿನ 76 ಗ್ರೂಪ್​ ಸಿ ಹುದ್ದೆಗಳು ಸೇರಿದಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಕೈಗಾರಿಕಾ ವಿಸ್ತರಣಾಧಿಕಾರಿ 63 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ವಿಸ್ತರಿಸಲಾಗಿದೆ.

ಈ ಹಿಂದೆ ಈ ಹುದ್ದೆಗಳಿಗೆ ಬಿಎಸ್ಸಿ, ಬಿಬಿಎ ಮತ್ತು ಬಿಇ ಪದವಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿತ್ತು. ಇದೀಗ ಬಿಬಿಎಂ ಮತ್ತು ಬಿ.ಟೆಕ್​ ಪದವಿ ಅಭ್ಯರ್ಥಿಗಳಿಗೂ ಕೂಡ ಅರ್ಜಿ ಸಲ್ಲಿಕೆಗೆ ಅವಕಾಶ ಒದಗಿಸಲಾಗಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜ ಸಲ್ಲಿಸಲು ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜುಲೈ 23ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 1 ಆಗಿದೆ.

ಈ ಹುದ್ದೆಗಳ ಕುರಿತಾದ ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್​ಸೈಟ್​ನಲ್ಲಿ kpsc.kar.nic.in ಗೆ ಭೇಟಿ ನೀಡಬಹುದಾಗಿದೆ.

Leave a Reply

Your email address will not be published. Required fields are marked *