ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ಅವರು ಚಿಕ್ಕೋಡಿ ಪಟ್ಟಣದಲ್ಲಿರುವ ಮನೆಯಲ್ಲಿ 19ಕ್ಕೂ ಅಧಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ. ತಕ್ಷಣ ಆಕೆಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ತುರ್ತು ಚಿಕಿತ್ಸೆ ನೀಡಲಾಗಿದೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿದ್ಯಾರ್ಥಿನಿ ಪಿಎಚ್ಡಿ ಪೂರ್ಣಗೊಳಿಸಿ ಆರು ತಿಂಗಳ ಹಿಂದೆ ಸಬ್‌ಮಿಟ್ ಮಾಡಿದ್ದರು. ಆದರೆ, ವಿನಾ ಕಾರಣ ಪದವಿ ನೀಡಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯ ಗೈಡ್ ಕೆ.ಎಲ್.ಎನ್. ಮೂರ್ತಿ, ಕುಲಪತಿ ಸಿ.ಎಂ. ತ್ಯಾಗರಾಜ್ ಮತ್ತು ರಿಜಿಸ್ಟರ್ ಸಂತೋಷ ಕಾಮೇಗೌಡ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಟಾರ್ಗೆಟ್ ಮಾಡಿರುವ ಆರೋಪಗಳು ಕೇಳಿಬಂದಿವೆ.
ಗೈಡ್ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ದೂರು ನೀಡಿದ್ದ ವಿದ್ಯಾರ್ಥಿನಿ
ಗೈಡ್ ಕೆಎಲ್ಎನ್ ಮೂರ್ತಿ ಲೈಂಗಿಕ ಕಿರುಕುಳ ನೀಡಿದ್ದ ವಿಚಾರವಾಗಿ ಕುಲಪತಿಯವರಿಗೆ ಹಾಗೂ ರಿಜಿಸ್ಟ್ರಾರ್ಗೆ ವಿದ್ಯಾರ್ಥಿನಿ ದೂರು ನೀಡಿದ್ದರು. ನಂತರ ಗೈಡ್ ಸಂಬಂಧಿತ ಸಮಸ್ಯೆ ಬಗೆಹರಿಸಲಾಗಿತ್ತು. ಆದರೂ ತಮ್ಮನ್ನು ಟಾರ್ಗೆಟ್ ಮಾಡಿ ಪಿಎಚ್ಡಿ ನೀಡಿಲ್ಲ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.
ಎಲ್ಲ ಸಮಸ್ಯೆ ಪರಿಹರಿಸಿದರೂ ಕೂಡ, ಪಿಎಚ್ಡಿ ಪದವಿ ನೀಡಲಿಲ್ಲ ಎಂಬ ಆರೋಪವನ್ನು ವಿದ್ಯಾರ್ಥಿನಿ ಮಾಡಿದ್ದಾರೆ. ಈ ಘಟನೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
For More Updates Join our WhatsApp Group :




