ಹಾಸನಾಂಬೆ ಸಾರ್ವಜನಿಕ ದರ್ಶನ ಅಂತ್ಯ : ಈ ವರ್ಷ ಸಂಗ್ರಹವಾದ ಆದಾಯ ಎಷ್ಟು ..?

ಹಾಸನಾಂಬೆ ದೇಗುಲ

ಹಾಸನಾಂಬೆ ದೇಗುಲ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ತಾಯಿಯ ದರ್ಶನ ಅಂತ್ಯಗೊಂಡಿದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ.

ಅಕ್ಟೋಬರ್​ 24 ಗುರುವಾರ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್​ 25 ರಿಂದ ನವೆಂಬರ್​ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತ

9 ದಿನಗಳಲ್ಲಿ ದಾಖಲೆಯ 20 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿ ದರ್ಶನ ಪಡೆದಿದ್ದು, ಹಾಸನಾಂಬ ದೇಗುಲಕ್ಕೆ 9 ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದು ಬಂದಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಬೆಳಗ್ಗೆ 11 50ರ ನಂತರ ದೇವಿಯ ವಿಶ್ವರೂಪ ದರ್ಶನ ಬಳಿಕ ಇಂದು ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ​​ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ, ಶಾಸಕ ಸ್ವರೂಪ್‌, ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಎಸ್​​ಪಿ ಮೊಹಮ್ಮದ್​ ಸುಜಿತಾ ಮತ್ತು ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಬಂದ್​ ಮಾಡಲಾಗುತ್ತದೆ.

Leave a Reply

Your email address will not be published. Required fields are marked *