ಹಾವೇರಿ || ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ : 13 ಜನರ ಸಾವು

ಹಾವೇರಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್ (ಟಿಟಿ) ಡಿಕ್ಕಿ ಹೊಡೆದ ಪರಿಣಾಮ 13 ಜನರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ‌ ನಡೆದಿದೆ.

ಮೃತರನ್ನು ಶಿವಮೊಗ್ಗ ಮೂಲದವರು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ‌ ನಿಂತಿದ್ದ ಲಾರಿಗೆ ಹಿಂದಿನಿಂದ ಟೆಂಪೋ ಟ್ರಾವೆಲ್ಲರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟಿಟಿ ವಾಹನದಲ್ಲಿದ್ದವರ ಪೈಕಿ 13 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಹನದಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯುವ ಕಾರ್ಯದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ‌ ನಿರತರಾಗಿದ್ದಾರೆ. ಶುಕ್ರವಾರ ಬೆಳಗಿನ ಜಾವ ನಾಲ್ಕೂವರೆ ಗಂಟೆಗೆ ಈ ದುರ್ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಮೃತದೇಹಗಳನ್ನು ಹೊರೆತೆಗೆಯುವ ಕಾರ್ಯಾಚರಣೆ ನಡೆಸಿದ್ದಾರೆ.

ಮೃತರ ಹೆಸರು:
ಪರಶುರಾಮ್ (45 ವರ್ಷ)
ಭಾಗ್ಯ (40 ವರ್ಷ)
ನಾಗೇಶ್ (50 ವರ್ಷ)
ವಿಶಾಲಾಕ್ಷಿ (40 ವರ್ಷ)
ಅರ್ಪಿತಾ (18 ವರ್ಷ)
ಸುಭದ್ರಾಬಾಯಿ (65 ವರ್ಷ)
ಪುಣ್ಯ (50 ವರ್ಷ)
ಮಂಜುಳುಬಾಯಿ (62 ವರ್ಷ)
ಆದರ್ಶ (23 ವರ್ಷ)
ಮಾನಸ (24 ವರ್ಷ)
ರೂಪಾ (40 ವರ್ಷ)
ಮಂಜುಳಾ (50 ವರ್ಷ)
ಇನ್ನೊಬ್ಬರ ಹೆಸರು ತಿಳಿದು ಬಂದಿಲ್ಲ

Leave a Reply

Your email address will not be published. Required fields are marked *