ಹಾವೇರಿ: ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಧನು ಹೊನ್ನಕ್ಕಳವರ್ ಸಾವನ್ನಪ್ಪಿದ್ದಾನೆ. ಕಳೆದೊಂದು ವಾರದಿಂದ ಈತ ತೀವ್ರ ಜ್ವರದಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರಾಣೇಬೆನ್ನೂರು ಟಿಎಚ್ಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಜಿಲ್ಲೆಯ ರೋಗಿಗಳು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾಡಳಿತ ಎಚ್ಚೆತ್ತು ಡೆಂಗ್ಯೂ ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.