ಹಾವೇರಿ: ಹಾವೇರಿಯ ಶ್ರೀ ಮೈಲಾರ ಮಹಾದೇವಪ್ಪ ರೈಲ್ವೆ ನಿಲ್ದಾಣದಲ್ಲಿ ನೈಋತ್ಯ ರೈಲ್ವೆ ವಲಯದ ವತಿಯಿಂದ ಏರ್ಪಡಿಸಿದ ವಂದೇ ಭಾರತ ರೈಲು ನಿಲುಗಡೆ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ಭಾಗವಹಿಸಿ,

ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಿಸಿ ಶ್ರೀ ಬಸವರಾಜ ಬೊಮ್ಮಾಯಿರವರು ಮಾತನಾಡಿದರು.
ಈ ಸಂಧರ್ಭದಲ್ಲಿ ಭಾರತ ಸರ್ಕಾರದ ರಾಜ್ಯ ರೈಲ್ವೆ ಹಾಗೂ ಜಲಶಕ್ತಿ ಸಚಿವರಾದ ಶ್ರೀ ವಿ ಸೋಮಣ್ಣ ರೈಲ್ವೆ ಇಲಾಖೆಯ ಡಿ.ಆರ್ ಎಮ್ ಶ್ರೀ ಮುದಿತ್ ಮಿತ್ತಲ್, ಚೀಪ್ ಕಮರ್ಷಿಯಲ್ ಮ್ಯಾನೇಜರ ಶ್ರೀ ಅನುಪ ಸಾಧು, ಜಿಲ್ಲಾಧಿಕಾರಿಗಳಾದ ಶ್ರೀ ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಶ್ರೀ ಅಂಶುಕುಮಾರ, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳಾದ ಶ್ರೀಮತಿ ರುಚಿ ಬಿಂದಾಲ್, ನಗರ ಸಭೆಯ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಮಾಳಗಿ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.