ಪ್ರಧಾನಿ ಮೋದಿ ಶುಭಾಶಯಕ್ಕೆ ಭಾವುಕರಾದ HDK.

ಪ್ರಧಾನಿ ಮೋದಿ ಶುಭಾಶಯಕ್ಕೆ ಭಾವುಕರಾದ HDK.

ಎಚ್.ಡಿ.ಕುಮಾರಸ್ವಾಮಿ ಜನ್ಮದಿನ.

ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ  ಅವರ 66ನೇ ಜನ್ಮ ದಿನ. ಇವರ ಜನ್ಮ ದಿನ ಪ್ರಯುಕ್ತ ಮಂಡ್ಯ ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಲಿದ್ದಾರೆ. ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೆಚ್. ಡಿ. ದೇವೇಗೌಡ, ಜೆಡಿಎಸ್​ ಮುಖಂಡರು, ಕಾರ್ಯಕರ್ತರು ಶುಭಾಶಯಗಳನ್ನು ಕೋರುತ್ತಿದ್ದಾರೆ.

ಕುಮಾರಸ್ವಾಮಿಗೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

HDK ಹುಟ್ಟುಬ್ಬಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಉಕ್ಕು ಮತ್ತು ಭಾರೀ ಕೈಗಾರಿಕೆಗಳಲ್ಲಿ ತಮ್ಮ ಕೆಲಸದ ಮೂಲಕ ಆತ್ಮನಿರ್ಭರತೆಯತ್ತ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತಿದ್ದೀರ. ಸಮಾಜ ಸೇವೆಯಲ್ಲಿ ನಿಮಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ ಎಂದು ಹಾರೈಸಿದ್ದಾರೆ. ಮೋದಿಯ ಹಾರೈಕೆಗೆ ಭಾವುಕಾರ ಕುಮಾರಸ್ವಾಮಿ, ಪ್ರಧಾನಿಯವರ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ . ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ. ಮಾನ್ಯ ಪ್ರಧಾನಿಗಳ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕಾರ್ಯಕರ್ತರಿಂದ ಎಚ್​ಡಿಕೆಗೆ ಸನ್ಮಾನ

ಹುಟ್ಟಿದ ಹಬ್ಬದ ಪ್ರಯುಕ್ತ ಇಂದು ಮದ್ದೂರಿಗೆ ಆಗಮಿಸಿದ ಅವರು, ಟಿಬಿ ವೃತ್ತದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ, ಮಂಡ್ಯದ ಜಯಚಾಮರಾಜ ಒಡೆಯರ್ (ಸಂಜಯ್) ವೃತ್ತದಲ್ಲಿ ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅದಾದ ಬಳಿಕ ಶ್ರೀರಂಗಪಟ್ಟಣ ಬಸ್ ನಿಲ್ದಾಣದ ಬಳಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮಗಳನ್ನು ಮುಗಿಸಿ ಮೈಸೂರಿಗೆ ಆಗಮಿಸಲಿರುವ ಅವರು ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಂಡ್ಯದ ಮಳವಳ್ಳಿಗೆ ಹಿಂತಿರುಗಿ ಅಧ್ಯಕ್ಷೆ ದ್ರೌಪದಿ ಮುರ್ಮು ಅವರೊಂದಿಗೆ ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿ ಸ್ವಾಮೀಜಿ ಅವರ 1066 ನೇ ಜಯಂತಿ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *