ಕೊರಟಗೆರೆಯಲ್ಲಿ ಗ್ರಾಮೀಣರಿಗಾಗಿ ‘ಗೃಹ ಆರೋಗ್ಯ’ಯೋಜನೆಗೆ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಚಾಲನೆ

ಕೊರಟಗೆರೆ: ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ನಮ್ಮ ಇಲಾಖೆ   ಗೃಹ ಆರೋಗ್ಯ ಎಂಬ ಹೆಸರಿನಲ್ಲಿ  ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕ್ರಮ ರೂಪಿಸಲು ಚಿಂತನೆ ನಡೆಸಿದ್ದು , ಗೃಹ ಸಚಿವರ ಉಸ್ತುವಾರಿ ಜಿಲ್ಲೆ ತುಮಕೂರು ಜಿಲ್ಲೆಯಿಂದ  ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ  ‘ಆರೋಗ್ಯ ತುಮಕೂರು ಅಭಿಯಾನ ಹಾಗೂ ಗೃಹ ಆರೋಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಆರೋಗ್ಯ ಕರ್ನಾಟಕ ಅಭಿಯಾನ, ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆ ಮನೆಗೆ ತೆರಳಿ  ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿರುವ ಕಾಯಿಲೆಗಳನ್ನು ಪತ್ತೆ ಹಚ್ಚಿ ಸೂಕ್ತವಾದ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ.  ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಎಂದರು.

ಯುವಕ

ಇoದು ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಹೃದಯ ಸಂಬ0ಧಿ ಕಾಯಿಲೆಗಳು ಹೆಚ್ಚುತ್ತಿದ್ದು ಕಾಯಿಲೆಗಳನ್ನು ಪ್ರಾಥಮಿಕ ಹಂತದಲ್ಲಿ ಇರುವಾಗಲೇ ತೋರಿಸಿಕೊಂಡರೆ, ಗುಣಮುಖರಾಗಬಹುದು ಸಚಿವರು, ಈಗಾಗಲೇ ಅನೀಮಿಯಾ ಮುಕ್ತ ಕರ್ನಾಟಕ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಸುಮಾರು 240 ಹೊಸ ಡಯಾಲಿಸಿಸ್ ಯಂತ್ರಗಳನ್ನು ಪ್ರಾರಂಭಿಸಲು ಟೆಂಡರ್ ಕರೆಯಲಾಗಿದ್ದು,  108 ಆಂಬುಲೆನ್ಸ್ ವಾಹನಗಳ ನಿರ್ವಹಣೆ ಮಾಡುವ ಸಲುವಾಗಿ ಮುಂದಿನ ದಿನಗಳಲ್ಲಿ ಕಾಯಕಲ್ಪ ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಕೆ ಶ್ರೀನಿವಾಸ್  ಮಾತನಾಡಿ, ಆರೋಗ್ಯ ತುಮಕೂರು ಅಭಿಯಾನದಡಿ ಜಿಲ್ಲೆಯ ೩೦ವರ್ಷ ಮೇಲ್ಪಟ್ಟವರಿಗೆಲ್ಲ ಆರೋಗ್ಯ ತಪಾಸಣೆ ಮಾಡಲಾಗುವುದು. ಯೋಜನೆಯ ಯಶಸ್ವಿಗೆ ಇಲಾಖೆಯ  ಅಧಿಕಾರಿಯಿಂದ ತಳಮಟ್ಟದ ಆಶಾ ಕಾರ್ಯಕರ್ತೆಯರವರೆಗೆ ರಾತ್ರಿ ಹಗಲೆನ್ನದೆ ಮುಂದಿನ ೭೫ದಿನಗಳ ಕಾಲ ಎಲ್ಲಾ ಸಾರ್ವಜನಿಕರನ್ನು ತಪಾಸಣೆ ಮಾಡಲು ಶ್ರಮವಹಿಸಿ ದುಡಿಯಬೇಕು ಎಂದು ಹೇಳಿ, ಜಿಲ್ಲೆಯಲ್ಲಿ ಆಶ್ರಯ ಯೋಜನೆಗಾಗಿ 2000 ಎಕರೆ ಭೂಮಿಯನ್ನು ಗುರುತಿಸಲಾಗಿದ್ದು, ಇದರ ಪೈಕಿ 1024 ಎಕರೆ ಜಮೀನನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುವುದು. ಸರ್ಕಾರದ  ಯೋಜನೆಗಳಿಗಾಗಿ ಅರ್ಜಿ ಹಾಕಿದ ಎಲ್ಲಾ ಜನರಿಗೂ  ಆದ್ಯತೆ ಮೇರೆಗೆ  ಸೌಲಭ್ಯಗಳನ್ನು ನೀಡಲಾಗುವುದು ಎಂದು  ತಿಳಿಸಿದರು.

ಜಿ ಪಂ ಸಿಇಓಜಿ ಪ್ರಭು ಮಾತನಾಡಿ, ಮೊದಲನೇ ಹಂತದ ಗಣತಿ ಪ್ರಕಾರ ಜಿಲ್ಲೆಯಲ್ಲಿ4 ಲಕ್ಷ 25 ಸಾವಿರ ಕುಟುಂಬಗಳ ಪೈಕಿ 30ವರ್ಷ ಮೆಲ್ಪಟ್ಟವರು  16ಲಕ್ಷ 25ಸಾವಿರ ಜನರಿದ್ದಾರೆ. ಇಷ್ಟು ಜನರಿಗೆ ಎರಡನೇ ಹಂತದಲ್ಲಿ ಪ್ರತಿ ಮನೆ ಮನೆಗೆ ತೆರಳಿ 10 ಕಾಯಿಲೆಗಳಿಗೆ ಸಂಬ0ಧಿಸಿದ0ತೆ   ತಪಾಸಣೆ  ಮಾಡಲಾಗುವುದು. ಈ ಅಭಿಯಾನ ಮುಂದಿನ 25 ದಿನಗಳ ಕಾಲ ನಡೆಯುತ್ತದೆ. ಮೂರನೇ ಹಂತದಲ್ಲಿ ಪತ್ತೆ ಹಚ್ಚಿದ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ತಾಯಿ ಮಕ್ಕಳ ಆಸ್ಪತ್ರೆಗೆ ಮನವಿ: ಕಾರ್ಯಕ್ರಮ ಉದ್ಘಾಟಿದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ ಜಿ.ಪರಮೇಶ್ವರ್, ಪಂಚವಾರ್ಷಿಕ ಯೋಜನೆಯಲ್ಲಿ ಆರೋಗ್ಯ, ಶಿಕ್ಷಣ, ಕೈಗಾರಿಕೆ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ  ಅನುಷ್ಠಾನ ಮಾಡುವುದರ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ.  8 ಜಿಲ್ಲೆಗಳಲ್ಲಿ ಮನೆ ಮನೆಗೆ ಆರೋಗ್ಯ ಅಭಿಯಾನ ಮಾಡುವುದಕ್ಕೆ ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು. ರಾಜ್ಯದಲ್ಲಿ ಪ್ರಥಮವಾಗಿ  ಕೊರಟಗೆರೆ ತಾಲ್ಲೂಕಿನಿಂದ  ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕೊರಟಗೆರೆ ತಾಲ್ಲೂಕು ಆಸ್ಪತ್ರೆ ಯಲ್ಲಿ  ತಿಂಗಳಿಗೆ ಸುಮಾರು 150 ರಿಂದ 200 ರವರೆಗೆ ಹೆರಿಗೆಗಳು ಆಗುತ್ತವೆ. ಆದರೆ ತಾಲೂಕು ಆಸ್ಪತ್ರೆ ಯಲ್ಲಿ ಸುಸಜ್ಜಿತವಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಇಲ್ಲವಾದ್ದರಿಂದ ನೂತನ ಕಟ್ಟಡ ನಿರ್ಮಾಣಕ್ಕೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅನ್ನು  ಪ್ರಾರಂಭಿಸುವುದಕ್ಕೆ ಆರೋಗ್ಯ ಇಲಾಖೆ ಅನುಮತಿ ನೀಡಬೇಕು ಎಂದು ಆರೋಗ್ಯ ಸಚಿವ ರಲ್ಲಿ  ಮನವಿ ಮಾಡಿದರು.

 ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ವಿಶೇಷ ದೆಹಲಿ ಪ್ರತಿನಿಧಿ ಟಿ. ಬಿ.ಜಯಚಂದ್ರ, ಶಾಸಕರುಗಳಾದ ಎಂ. ಟಿ.ಕೃಷ್ಣಪ್ಪ, ಜ್ಯೋತಿ ಗಣೇಶ್, ಹೆಚ್.ವಿ.ವೆಂಕಟೇಶ್,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ., ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ರಿಷಿ ಆನಂದ್, ಡಿಹೆಚ್‌ಓ ಡಾ.ಮಂಜುನಾಥ್, ತಹಶೀಲ್ದಾರ್ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿ ದೀಪಶ್ರೀ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ದಾಸ್ತಾನು ಇಲ್ಲದ ಔಷಧಿಗಳ ಚೀಟಿ ಬರೆಯಬೇಡಿ

ಸರ್ಕಾರಿ ಆಸ್ಪತ್ರೆಗಳಿಗೆ ಬರುವವರು ಬಡವರಾಗಿರುತ್ತಾರೆ, ಅಂತಹವರಿಗೆ ನೆರವಾಗುವುದು ನಮ್ಮ ಕರ್ತವ್ಯ. ಆಸ್ಪತ್ರೆಗಳಲ್ಲಿ ದಾಸ್ತಾನು ಇರಬೇಕಾದ ಔಷಧಿಗಳನ್ನು ಪರಿಶೀಲನೆ ಮಾಡಬೇಕು. ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಸ್ತಾನು ಇಲ್ಲದ ಔಷಧಿಗಳನ್ನು ವೈದ್ಯರು ರೋಗಿಗಳ ಔಷಧಿ ಚೀಟಿಗಳಲ್ಲಿ ಬರೆಯಬಾರದು. ದಾಸ್ತಾನು ಪರಿಶೀಲಿಸಿ ಮೊದಲೇ ತರಿಸಿಕೊಂಡು ವಿತರಿಸುವ ಕಾರ್ಯ ಕಾಲಕಾಲಕ್ಕೆ ಆಗಬೇಕು ಎಂದು ಆರೋಗ್ಯ ಸಚಿವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

Pragati TV Social Connect for more latest u

Leave a Reply

Your email address will not be published. Required fields are marked *