ಆರೋಗ್ಯ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ?

ಆರೋಗ್ಯ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ?

ಸಿಎಂ ಹೆಸರಲ್ಲಿ ವೈರಲ್ ಪತ್ರ ವಿವಾದ ಸೃಷ್ಟಿ.

ಬೆಂಗಳೂರು: ಮಂಡ್ಯ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ  ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಬರೆದಿರುವ ಪತ್ರ ವೈರಲ್​​ ಆಗಿರೋದು ಈಗ ವಿವಾದವಾಗಿ ಮಾರ್ಪಟ್ಟಿದೆ. ನಿಯಮಾವಳಿಗಳನ್ನು ಗಾಳಿಗೆ ತೂರಿ, ಆರೋಗ್ಯ ಇಲಾಖೆಯ ಡಿಎಚ್‌ಓ ಮೋಹನ್ ಅವರನ್ನು ಅಬಕಾರಿ ಉಪ ಆಯುಕ್ತರನ್ನಾಗಿ ನೇಮಿಸಲು ಶಿಫಾರಸ್ಸು ಮಾಡಿರುವ ಪತ್ರದ ಬಗ್ಗೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.

ಸಿಎಂ ಸ್ಪಷ್ಟನೆಗೆ ಬಿಜೆಪಿ ಪಟ್ಟು

ವೈರಲ್ ಆಗಿರುವ ಮುಖ್ಯಮಂತ್ರಿಗಳದ್ದು ಎನ್ನಲಾದ ಶಿಫಾರಸ್ಸು ಪತ್ರದಲ್ಲಿ ಪತ್ರದ ಸಂಖ್ಯೆಯಾಗಲಿ ಅಥವಾ ದಿನಾಂಕವಾಗಲಿ ನಮೂದಾಗಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ಸಹಿ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೀಗಾಗಿ ವರ್ಗಾವಣೆ ದಂಧೆಯ ಹಿಂದೆ ಕುಟುಂಬದ ವ್ಯಕ್ತಿಯೊಬ್ಬರ ಕೈವಾಡವಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಮಾಡಿದ್ದು, ಸಿಎಂ ಈ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಪಟ್ಟು ಹಿಡಿದಿದೆ.

 ‘ಸಾರಾಯಿ ಮಾರೋಕೆ ಡಾಕ್ಟರ್ ಯಾಕೆ?’

ಪತ್ರದ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಸುನಿಲ್ ಕುಮಾರ್, ವರ್ಗಾವಣೆ ದಂಧೆಯಲ್ಲಿ ಎಲ್ಲಾ ಇಲಾಖೆಗಳು ಮುಳುಗಿವೆ. ಸರ್ಕಾರದ ಆಡಳಿತ ಹಳಿ ತಪ್ಪಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇನ್ನು ವೈದ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ಹಾಕುವುದು ಅತ್ಯಂತ ಅನುಚಿತ. ಇದು ತುಘಲಕ್ ದರ್ಬಾರ್ ಎಂದು ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಒಂದು ಹೆಜ್ಜೆ ಮುಂದೆ ಹೋಗಿರುವ ಶಾಸಕ ಅಭಯ್ ಪಾಟೀಲ್ , ಸಾರಾಯಿ ಮಾರೋಕೆ ಡಾಕ್ಟರ್ ಯಾಕೆ? ಇಮಾಮ್ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ? ಸಿಎಂಗೆ ಅರಳು ಮರಳಾಗಿದ್ದು, ಚಿಕಿತ್ಸೆಯ ಅಗತ್ಯವಿದೆ ಎಂದು ಲೇವಡಿ ಮಾಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *