ಪತ್ನಿಯ ಎಸ್ಕೇಪ್ ಬಳಿಕ ಮನನೊಂದು ಪತಿಯ ಭೀಕರ ನಿರ್ಧಾರ.!
ತುಮಕೂರು : ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಚಿನ್ನಾಭರಣದೊಂದಿಗೆ ಪತ್ನಿ ಪರಾರಿಯಾದ ಘಟನೆ ನಂತರ ಪತಿ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣುಬಿಗಿದುಕೊಂಡಿರುವ ದಾರುಣ ಘಟನೆ ನಡೆದಿದೆ.
ಮಲ್ಲೇಶ್ವರಸ್ವಾಮಿ ದೇಗುಲದ ಅರ್ಚಕ ಹಾಗೂ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಶಿವಣ್ಣ (40) ತನ್ನ ಮಕ್ಕಳಾದ ಜೀವನ್ (10) ಮತ್ತು ಪ್ರಾಣೇಶ್ (5) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಶಿವಣ್ಣನ ಪತ್ನಿಗೆ ಪರಪುರುಷನೊಂದಿಗೆ ಸಂಬಂಧ ಇದ್ದು, ಇದೇ ಕಾರಣಕ್ಕೆ ದಂಪತಿಗಳ ನಡುವೆ ನಿರಂತರ ಜಗಳ ನಡೆಯುತ್ತಿತ್ತು. ಕೆಲ ದಿನಗಳ ಹಿಂದೆ ಪತ್ನಿ ಮನೆಯಿಂದ ಓಡಿಹೋಗಿದ್ದಳು.
ಪೊಲೀಸ್ ಮಧ್ಯಸ್ಥಿಕೆಯ ಬಳಿಕ ಮನೆಗೆ ಮರಳಿದ್ದ ಪತ್ನಿ, ಮರುದಿನವೇ ಮನೆಯಲ್ಲಿ ಇದ್ದ ಚಿನ್ನಾಭರಣ ಮತ್ತು ಹಣದೊಂದಿಗೆ ಮತ್ತೆ ಪರಾರಿಯಾಗಿದ್ದಾಳೆ ಎಂದು ಆರೋಪಿಸಲಾಗಿದೆ. ಇದರಿಂದ ಶಿವಣ್ಣ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾನೆ.
ಘಟನೆ ಬೆಳಕಿಗೆ ಬಂದ ತಕ್ಷಣ ಕುಣಿಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.ಮಕ್ಕಳ ಸಹಿತ ತಂದೆಯ ಸಾವಿನಿಂದ ಆಲ್ಕೆರೆ ಗ್ರಾಮದಲ್ಲಿ ಆಘಾತ ಮತ್ತು ಶೋಕದ ವಾತಾವರಣ ನಿರ್ಮಾಣವಾಗಿದೆ.
For More Updates Join our WhatsApp Group :




