ಪಾವಗಡ:-ಮೃತದೇಹನ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧರ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲಿ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಹೃದಯವಿದ್ರಾವಕ ಘಟನೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ ಸುಮಾರು ಒಂದು ಗಂಟೆಯಲ್ಲಿ ಜರುಗಿದೆ
ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವಿರುದ್ಧ ವೈ ಎನ್ ಹೋಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟಿದ್ದರು, ಮೃತಪಟ್ಟಿರುವ ಹೊನ್ನೂರಪ್ಪ ಅವರ ಶವವನ್ನು ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ದ್ವಿಚಕ್ರ ವಾಹನದಲ್ಲಿಯೇ ಹೊನ್ನೂರಪ್ಪ ಅವರ ಹಿರಿಯ ಪುತ್ರ ಚಂದ್ರಣ್ಣ ಮತ್ತು ಕಿರಿಯ ಪುತ್ರ ಗೋಪಾಲಪ್ಪ ತಮ್ಮೂರಿಗೆ ತೆಗೆದುಕೊಂಡು ತೆಗೆದುಕೊಂಡು ಹೋಗಿದ್ದಾರೆ.
ಪಾವಗಡ ತಾಲೂಕು ಎಷ್ಟು ಹಿಂದುಳಿದರು ಇಂತಹ ಹೃದಯವಿದ್ರಾವಕ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದು ಒಂದು ರೀತಿ ಆಡಳಿತದ ನಿರ್ಲಕ್ಷಕ್ಕೆ ಇಡಿದ ಕೈಗಡಿಯಾಗಿದೆ… ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಸಚಿವರುಗಳು ಇಂತಹ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವಿದೆ ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯವಾಗಿದೆ.