ಕರ್ನಾಟಕದಲ್ಲಿ ಉಷ್ಣ ಅಲೆ ತೀವ್ರ.!

ಕರ್ನಾಟಕದಲ್ಲಿ ಉಷ್ಣ ಅಲೆ ತೀವ್ರ.!

ರಾಜ್ಯಾದ್ಯಂತ ತಾಪಮಾನ ಏರಿಕೆ – ಜನರಿಗೆ ಎಚ್ಚರಿಕೆ

ಬೆಂಗಳೂರು : ಬೇಸಿಗೆಗೆ ಕಾಲಿಡುವಷ್ಟರಲ್ಲೇ ರಾಜ್ಯದಾದ್ಯಂತ ಉಷ್ಣ ಅಲೆ ಆವರಿಸಿದೆ. ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರಾವಳಿಯು ಬಿಸಿಲ ಬೇಗೆಯಲ್ಲಿ ಸುಡುತ್ತಿದೆ. ಉತ್ತರ ಕನ್ನಡದಲ್ಲಿ ಇಂದಿನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇದ್ದು, ಇದು 42 ಡಿಗ್ರಿಗೂ ಏರಿಕೆಯಾಗಬಹುದು. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಿನ ತಾಪಮಾನ ದಾಖಲಾಗಿದ್ದು, ಈ ನಡುವೆ ಸಾಧಾರಣ ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಹೀಟ್ ವೇವ್ ಅಲರ್ಟ್​ ನೀಡಲಾಗಿದೆ.

ಎಲ್ಲೆಲ್ಲಿ ಒಣ ಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *