ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಮಳೆ ಸದ್ದು.!
ಬೆಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆ ಆರಂಭವಾಗಿದೆ. ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್ ಪ್ರದೇಶಗಳಲ್ಲಿ ದಿಢೀರನೆ ಭಾರೀ ಮಳೆಯಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಬೀದರ್, ಕಲ್ಬುರ್ಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಪ್ರದೇಶಗಳಲ್ಲಿ ಶುಷ್ಕ ವಾತಾವರಣ ಇರಲಿದೆ.ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ.ಮೇ 5ರಿಂದ ಮೇ 7ರವರೆಗೆ ದಕ್ಷಿಣ ಒಳನಾಡಿನ ಕೆಲವೆಡೆಗಂಟೆಗೆ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3.1°C ರಿಂದ 5.0°C ಹೆಚ್ಚಾಗಿದೆ.ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ 1.6°C ರಿಂದ 3.0°C ಹೆಚ್ಚಳ ಕಂಡುಬಂದಿದೆ
For More Updates Join our WhatsApp Group :




