ರಾಜ್ಯದಲ್ಲಿ 4 ದಿನ ಭಾರೀ ಮಳೆ ಮುನ್ಸೂಚನೆ.!

ರಾಜ್ಯದಲ್ಲಿ 4 ದಿನ ಭಾರೀ ಮಳೆ ಮುನ್ಸೂಚನೆ.!

ಗುಡುಗು–ಸಿಡಿಲು, ಆಲಿಕಲ್ಲು ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ.

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸೂರ್ಯನ ಪ್ರಖರತೆಗೆ ಬೆಂದು ಹೋಗಿದ್ದ ಜನತೆಗೆ ವರುಣ ದೇವ ತಂಪೆರೆಯಲು ಸಜ್ಜಾಗಿದ್ದಾನೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ ಸಿಕ್ಕಿದೆ.

ಕರಾವಳಿ ಹಾಗೂ ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಗಡಿಭಾಗದ ಕಾಸರಗೋಡಿನಲ್ಲಿ ಇಂದು ಮಧ್ಯಾಹ್ನದ ನಂತರ ಹವಾಮಾನ ಬದಲಾಗಲಿದೆ. ಸಂಜೆ ವೇಳೆಗೆ ಭಾರಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿನ ಗಾಳಿಯ ಒತ್ತಡದ ಪರಿಣಾಮ ಮುಂದಿನ ಮೂರು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ.

ಇನ್ನು ಮಲೆನಾಡಿನ ಭಾಗಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಇದು ಕಾಫಿ ಮತ್ತು ಮಾವು ಬೆಳೆಗಾರರಲ್ಲಿ ಆತಂಕ ಮೂಡಿಸಿದೆ.

ಬಿಸಿಲ ನಾಡಿಗೆ ಮಳೆಯ ಆಸರೆ : ಬೆಳಗಾವಿ, ಧಾರವಾಡ, ಹಾವೇರಿ: ಮುಂದಿನ 4 ದಿನ ಸಾಧಾರಣ ಮಳೆ. ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ: ಈ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ದಟ್ಟ ಲಕ್ಷಣಗಳಿದ್ದು, ರೈತರು ಜಾಗರೂಕರಾಗಿರಲು ಸೂಚಿಸಲಾಗಿದೆ.

ಬೆಂಗಳೂರು ಮತ್ತು ದಕ್ಷಿಣ ಒಳನಾಡು: ರಾಜಧಾನಿ ಬೆಂಗಳೂರಿನಲ್ಲಿ ಸದ್ಯಕ್ಕೆ ಮೋಡ ಕವಿದ ವಾತಾವರಣವಷ್ಟೇ ಇರಲಿದ್ದು, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯದಲ್ಲಿ ಸಾಧಾರಣ ಮಳೆಯಾಗಬಹುದು. ಆದರೆ, ಈ ಭಾಗದ ಜನರಿಗೆ ಪೂರ್ಣ ಪ್ರಮಾಣದ ಮಳೆಯ ದರ್ಶನವಾಗಲು ಏಪ್ರಿಲ್ 23 ಮತ್ತು 24ರವರೆಗೆ ಕಾಯಲೇಬೇಕಿದೆ.ಮಳೆಯ ಮುನ್ಸೂಚನೆಯ ನಡುವೆಯೂ ಕರಾವಳಿ ಮತ್ತು ಕಲ್ಯಾಣ ಕರ್ನಾಟಕದಲ್ಲಿ ‘ಉಷ್ಣ ಅಲೆ’ ಅಪಾಯ ಕಮ್ಮಿಯಾಗಿಲ್ಲ.

ತಾಪಮಾನ: ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಲುಪುವ ಆತಂಕವಿದೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಕ್ಕಳು, ವೃದ್ಧರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಬಿಸಿಲಿಗೆ ಹೋಗದಂತೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *