ಬೆಂಗಳೂರು: ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇಂದಿನಿಂದ ಸೆ.5 ರವರೆಗೆ ಭಾರಿ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಬೀದರ್, ರಾಯಚೂರು, ಕಲಬುರಗಿ, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ರಾಮನಗರ, ವಿಜಯನಗರ, ಕೊಡಗು, ಹಾಸನ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ ಹಾಗೂ ಬೆಳಗಾವಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕಲ್ಯಾಣ ಕರ್ನಾಟಕ, ಕರಾವಳಿ ಹೊರತುಪಡಿಸಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ ಮಳೆಯಾಗುತ್ತಿದೆ. ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.
ಹೆಚ್ಎಎಲ್ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.