ಬೆಂಗಳೂರು ಸೇರಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ತಂಪಾದ ಗಾಳಿ ಇರಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 23°C ಆಸುಪಾಸಿನಲ್ಲಿರಲಿದೆ. ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಯಿದ್ದು, ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಎಚ್ಚರಿಸಲಾಗಿದೆ.

ರೈತರು ಮತ್ತು ಸಾರ್ವಜನಿಕರಿಗೆ ಸೂಚನೆ:ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ದಾಖಲಾಗಿತ್ತು. ಈಗ ಮಳೆಯಾಗುತ್ತಿರುವುದು ಬಿಸಿಲಿನಿಂದ ಸಮಾಧಾನ ತಂದಿದ್ದರೂ, ಗುಡುಗು ಮತ್ತು ಮಿಂಚಿನ ಸಮಯದಲ್ಲಿ ರೈತರು ಮತ್ತು ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.
ಕರ್ನಾಟಕದ ಜೊತೆಗೆ ನೆರೆ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡಿನಲ್ಲೂ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ.
For More Updates Join our WhatsApp Group :




